ನ.26ರಂದು ರಾಜ್ಯದ ಪ್ರಮುಖ ಜಲಾಶಗಳಲ್ಲಿನ ನೀರಿನ ಮಟ್ಟ
ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಅಬ್ಬರ ಕಡಿಮೆಯಾಗುತ್ತಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಗುರುವಾರ ಬಹುತೇಕ ಮೋಡ ಕವಿದ ವಾತಾವರಣ, ಅಲ್ಪ ಪ್ರಮಾಣದಲ್ಲಿ ಗಾಳಿ ಮಳೆ ಬಿದ್ದಿದೆ, ನಾಳೆ ಕೂಡಾ ಇದೆ ರೀತಿ ಹವಾಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಬೆಳಗ್ಗೆಯಿಂದ ಮೋಡ ಕವಿದಿದ್ದು, ಸಂಜೆ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ, ಎಲ್ಲೆಡೆ ಚಳಿ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂದಿನ 2 ದಿನಗಳ ಕಾಲ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸುರಿಯುವ ಸಂಭವವಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಭಾಗಗಳಲ್ಲಿ ಇನ್ನು ಎರಡು ದಿನಗಳ ಕಾಲ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲಿನ ಗುಮ್ಮಕಲ್ಲು ಎಂಬಲ್ಲಿ ಅತಯ್ಧಿಕ 60.5 ಮಿ.ಮೀ ಮಳೆ ಸುರಿದಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.26) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications