ನ.27ರಂದು ಕರ್ನಾಟಕದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತದ ಪ್ರಭಾವ ಕಡಿಮೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಬಹುತೇಕ ಮೋಡ ಕವಿದ ವಾತಾವರಣ, ಅಲ್ಪ ಪ್ರಮಾಣದಲ್ಲಿ ಇನ್ನೆರಡು ದಿನಗಳ ಕಾಲ ಗಾಳಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಗುರುವಾರ ತುಂತುರು ಮಳೆಯಾಗಿದೆ. ತುಮಕೂರು, ಬಳ್ಳಾರಿ ಮತ್ತು ಉತ್ತರ ಕರ್ನಾಟಕದ ಕೆಲವು ಕಡೆ ಸಹ ಮಳೆಯಾಗಿದೆ.
ಮುಂದಿನ 2 ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಬೆಳಗ್ಗೆ ಹೊತ್ತು ಕೆಲ ಕಾಲ ಬಿಸಿಲಿನ ವಾತವರಣ ಕೆಲವೆಡೆ ಕಂಡು ಬರಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರ ಜಿಲ್ಲೆಯ ವರ್ತೂರು ಎಂಬಲ್ಲಿ ಅತ್ಯಧಿಕ 30 ಮಿ.ಮೀ ಮಳೆ ಸುರಿದಿದೆ. ಇದೇ ವೇಳೆ ಕೋಲಾರದ ಶ್ರೀನಿವಾಸಪುರದ ನೆಲವಂಕಿ ಎಂಬಲ್ಲಿ 109.5 ಮಿ.ಮೀ ಮಳೆಯಾಗಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ನ.26) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಬಲವಾದ ಮೈಲ್ಮೈಸುಳಿಗಾಳಿ ಬೀಸುತ್ತಿದ್ದು, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications