ಕರ್ನಾಟಕದ ಮಳೆ ಹಾಗೂ ಜಲಾಶಯ ನೀರಿನ ಮಟ್ಟ ವರದಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮೈಸೂರು ಜಿಲ್ಲೆ ವಾಜಮಂಗಲ ಎಂಬಲ್ಲಿ ಅತ್ಯಧಿಕ 137 ಮಿ. ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.1) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಬಿಬಿಎಂಪಿ ಮಳೆ ಮುನ್ಸೂಚನೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧರಣ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications