ಅಕ್ಟೋಬರ್ 04ರಂದು ಕರ್ನಾಟಕದ ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 04: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಬಿಡುವು ಪಡೆದಿದ್ದ ಮಳೆ, ಇದೀಗ ಮತ್ತೆ ಎರಡು ದಿನದಿಂದ ಹೆಚ್ಚಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಇನ್ನಿತರ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ 'ಯೆಲ್ಲೋ ಅಲರ್ಟ್'ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ಥವಾಯಿತು.
ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಪ್ರಭಾವ ಬೀರಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಅಕ್ಟೋಬರ್ 5 ರಿಂದ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ರಾತ್ರಿ ಬೆಂಗಳೂರು ನಗರದಲ್ಲಿ ಸಹ ಕೆಲ ಹೊತ್ತು ಮಳೆ ಸುರಿದಿದೆ.
ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಹ ಇಂದು ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಅ.4 ಮತ್ತು 5 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತದ ಕೆಲ ರಾಜ್ಯಗಳು, ವಿದರ್ಭ, ಮರಾಠವಾಡ, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ. ಇದೀಗ ರಾಜ್ಯಾದ್ಯಂತ ಅಣೆಕಟ್ಟುಗಳಲ್ಲಿನ ಮಟ್ಟವೂ ಏರಿಕೆಯಾಗಿದೆ.
ಕೆಲವು ಜಲಾಶಯಗಳ ನೀರಿನ ಮಟ್ಟದ ಬ್ಗಗೆ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್‌ಸಿ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 553.47 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.05ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 887.95ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 694.92ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 34.59 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.31ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.57ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.17ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.44ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 556..62ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 633.59ನೀರು ಸಂಗ್ರಹವಾಗಿದೆ.












Click it and Unblock the Notifications