ಕರ್ನಾಟಕದ ಮಳೆ ಮುನ್ಸೂಚನೆ, ಅಣೆಕಟ್ಟುಗಳ ನೀರಿನ ಮಟ್ಟ
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರುಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ವರುಣನ ಆರ್ಭಟ ಎರಡು ದಿನಗಳಿಂದ ಕೊಂಚ ತಗ್ಗಿದೆ. ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಯ ತಾಲೂಕುವಾರು ಮಳೆ ವಿವರ, ಸಹಾಯವಾಣಿ
ಕಳೆದ 24 ಗಂಟೆಗಳ ಅವಧಿಯಲ್ಲಿ ಮಂಡ್ಯ ಜಿಲ್ಲೆ ಕೆ. ಆರ್ ಪೇಟೆಯ ಗಂಜಿಗೆರೆ ಎಂಬಲ್ಲಿ ಅತ್ಯಧಿಕ 91.5 ಮಿ. ಮೀನಷ್ಟು ಮಳೆಯಾಗಿದೆ, ಬೆಂಗಳೂರು ಅಂಜನಾಪುರದಲ್ಲಿ 49.5ಮಿ.ಮೀನಷ್ಟು ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.4) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.