ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ನೀರಿನ ಮಟ್ಟ

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಳ್ಳಾರಿ ಜಿಲ್ಲೆಯ ಹಲವೆಡೆ, ವಿಜಯಪುರ ಜಿಲ್ಲೆಯಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮುಂತಾದೆಡೇ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಹಲವೆಡೆ ಮಳೆ ಪ್ರಮಾಣ ತಗ್ಗಿದೆ. ಮುಂದಿನ 48 ಗಂಟೆಗಳ ಕಾಲ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಕೊಕ್ಕಡ ಎಂಬಲ್ಲಿ ಅತ್ಯಧಿಕ 87.5ಮಿ. ಮೀನಷ್ಟು ಮಳೆಯಾಗಿದೆ, ಬೆಂಗಳೂರು ಅಂಜನಾಪುರದಲ್ಲಿ 49.5ಮಿ.ಮೀನಷ್ಟು ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.5) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+