• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ರಾಜ್ಯದ ಮಳೆ ವರದಿ, ಜಲಾಶಯಗಳ ನೀರಿನ ಮಟ್ಟ

|

ಕರ್ನಾಟಕದ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮುಂತಾದೆಡೆ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಹಲವೆಡೆ ಮಳೆ ಪ್ರಮಾಣ ತಗ್ಗಿದೆ, ಕೆಲವೆಡೆ ಸಾಧಾರಣ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಹುಬ್ಬಳ್ಳಿ-ಧಾರವಾಡ ಪ್ರದೇಶ ಅದರಗುಂಚಿಎಂಬಲ್ಲಿ ಅತ್ಯಧಿಕ 63ಮಿ. ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.6) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ (ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

English summary
Karnataka's Weather report and major Dams Water Level Today October 06: Check complete details on dam water level of KRS Dam, Bhadra, TB Dam, Linganamakki, Harangi, Hemavathi, Alamatti, Narayanapura, Supa, Ghataprabha and Malaprabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X