Infographics: ಅ.7ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು, ಅಕ್ಟೋಬರ್ 07: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿವೆ. ಹಾಗೆಯೇ ಕೆಲವು ಜಲಾಶಯಗಳು ಭರ್ತಿಯಾಗಿವೆ.
ತಮಿಳುನಾಡಿನ ಕರಾವಳಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವ ರಾಜ್ಯದ ಮೇಲೆ ಆಗಿದ್ದು ಎಲ್ಲೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಮುಂಗಾರು ಋುತು ಸೆಪ್ಟೆಂಬರ್‌ಗೆ ಅಧಿಕೃತವಾಗಿ ಕೊನೆಗೊಂಡಿದ್ದರೂ ಹವಾಮಾನ ವೈಪರೀತ್ಯಗಳ ಕಾರಣದಿಂದ ಮಳೆಯ ಅಬ್ಬರ ಮುಂದುವರಿದಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಯ ಅವಧಿಯಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರಿನ ಕಡೂರಿನಲ್ಲಿ 7 ಸೆಂಮೀ, ದಕ್ಷಿಣ ಕನ್ನಡದ ಬೆಳ್ತಂಗಡಿ 6 ಸೆಂಮೀ, ಕಲಬುರಗಿಯ ಜೇವರ್ಗಿ, ಉತ್ತರ ಕನ್ನಡದ ಜಗಲಬೆಟ್, ಬೆಳಗಾವಿಯ ಯರಗತ್ತಿ ತಲಾ 5 ಸೆಂಮೀ ಮಳೆಯಾಗಿದೆ.
ಚಿತ್ರದುರ್ಗ, ಹೊಸದುರ್ಗ, ಬನವಾಸಿ, ಕಾರವಾರ, ಪಾವಗಡ, ಜಾನ್ಮನೆ, ಗೌರಿಬಿದನೂರು, ಮಂಚಿಕೆರೆ, ತ್ಯಾಗರ್ತಿ, ಭದ್ರಾವತಿ, ಗೋಕರ್ಣ, ಹಳಿಯಾಳ, ಶಿವಮೊಗ್ಗ, ಭದ್ರಾವತಿ, ತ್ಯಾಗರ್ತಿ, ಕುಮಟಾ, ಹಿರೆಕೆರೂರು, ಹಾಸನ, ಚನ್ನಗಿರಿ, ಸಂತೆಬೆನ್ನೂರು, ಅಂಕೋಲಾ, ಕಡೂರು, ಸಂಕೇಶ್ವರದಲ್ಲಿ ಮಳೆಯಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಮುಚ್ಚಿ ಹೋಗಿರುವ ಚರಂಡಿಗಳು ಮತ್ತು ಮಳೆ ನೀರು ಹರಿಯುವ ಚರಂಡಿಗಳ ಮರು ಪರಿಶೀಲನೆ ನಡೆಸುವುದಾಗಿ ಈ ಹಿಂದೆ ಬಿಬಿಎಂಪಿ ತಿಳಿಸಿತ್ತು. ಆದರೆ, ಮಳೆಗಾಲ ಮುಗಿಯುತ್ತಾ ಬಂದರೂ ಚರಂಡಿಗಳ ವ್ಯವಸ್ಥೆ ಮಾತ್ರ ಸರಿಯಾಗಿಲ್ಲ. ಹೀಗಾಗಿ ಭಾನುವಾರ ಸುರಿದ ಮಳೆಗೆ ಇಷ್ಟೆಲ್ಲಾ ಹಾನಿಯಾಗಲು ಇದು ಕೂಡಾ ಕಾರಣವಾಗಿದೆ. ಚರಂಡಿಗಳ ಹೂಳು ತೆಗೆದು, ಮಳೆ ನೀರು ಸುಗಮವಾಗಿ ಹರಿಯುವಂತೆ ಮಾಡುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂಬುದು ಸಾರ್ವಜನಿಕರ ಆರೋಪ.
ಬೆಂಗಳೂರು ಸ್ವಲ್ಪ ಮೋಡಕವಿದ ವಾತಾವರಣವಿದ್ದು, ಬಿಸಿಲ ಝಳವು ಹೆಚ್ಚಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಒಳನಾಡು ಪ್ರದೇಶದಲ್ಲಿ ಮುಂದಿನ 3 ದಿನ ಮಳೆಯಾಗಲಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಘಾಟ್ ಸೆಕ್ಷನ್ ಏರಿಯಾಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದ್ದು, ಯಲಹಂಕ, ಹೆಚ್ಎಎಲ್ ಭಾಗದಲ್ಲಿ ಧಾರಾಕಾರವಾಗಿ ಸುರಿಯುವ ನಿರೀಕ್ಷೆ ಇದೆ.
ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಳೆ ಪರಿಸ್ಥಿತಿ ನಿರ್ವಹಣೆಗೆ 63 ಉಪ ವಿಭಾಗಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಾತ್ಕಾಲಿಕ ನಿಯಂತ್ರಣ ಕೊಠಡಿ ತೆರೆದಿದೆ.

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ
ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 553.51 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.09ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 887.81ಮೀಟರ್‌ನಷ್ಟಿದೆ.

ಕಬಿನಿ ಜಲಾಶಯದ ಮಟ್ಟ
ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 694.92ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 34.88 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.55ರಷ್ಟಿದೆ.

ತುಂಗಭದ್ರಾ ಜಲಾಶಯ
ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.57ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.20ಮೀಟರ್‌ನಷ್ಟು ನೀರಿದೆ.

ಸೂಪಾ ಜಲಾಶಯದ ನೀರಿನ ಮಟ್ಟ
ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.44ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 556.58ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್ ನೀರಿನ ಸಾಮರ್ಥ್ಯವಿದ್ದು, 633.59ನೀರು ಸಂಗ್ರಹವಾಗಿದೆ.












Click it and Unblock the Notifications