Infographics: ಅ.08ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಅಕ್ಟೋಬರ್ 08: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಹೊಯ್ಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ಪಡೆದಿದೆ.

ರಾಜ್ಯಾದ್ಯಂತ ಮೋಡಕವಿದ ವಾತಾವರಣವಿದ್ದರೂ ಅಲ್ಲಲ್ಲಿ ಮಳೆಯಾಗಿದೆ. ಹಲವು ಜಲಾಶಯಗಳು ಭರ್ತಿಯಾಗಿವೆ. ಈಗಾಗಲೇ ಅಕ್ಟೋಬರ್ 6 ಕ್ಕೆ ಮುಂಗಾರುಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ.

ನೈರುತ್ಯ ಬಂಗಾಳ ಕೊಲ್ಲಿಯಿಂದ ಪೂರ್ವ ಮಧ್ಯ ಅರಬ್ಬಿ ಸಮುದ್ರದವರೆಗೆ ಹಾಗೂ ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ಒಂದು ಮುಂಗಾರು ತೊಟ್ಟಿ ವಿಸ್ತರಿಸಿದ್ದು, ಇದು ರಾಜ್ಯದಲ್ಲಿ ಮಳೆಗೆ ಕಾರಣವಾಗಿದೆ.

ಶುಕ್ರವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.

ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಮಧ್ಯ ಮಹಾರಾಷ್ಟ್ರ, ದಕ್ಷಿಣ ಕೊಂಕಣ, ಗೋವಾ, ದಕ್ಷಿಣ ಅಸ್ಸಾಂ, ಮೇಘಾಲಯ, ತ್ರಿಪುರ, ಆಂಧ್ರದ ಕರಾವಳಿ, ರಾಯಲಸೀಮೆ ಹಾಗೂ ಕರ್ನಾಟಕ ಕರಾವಳಿಯಲ್ಲಿ ಅಧಿಕ ಮಳೆ ಮುನ್ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಳ, ಗೋವಾ, , ಛತ್ತೀಸ್‌ಗಢ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದೆಹಲಿ, ಜಾರ್ಖಂಡ್, ಗುಜರಾತ್​ ರಾಜ್ಯಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ. ಕರಾವಳಿಯ ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಸಿಕ್ಕಿಂನಲ್ಲಿ ಸಾಧಾರಣವಾದ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ, ಕೊಂಕಣ ಮತ್ತು ಗೋವಾ ಮತ್ತು ವಿದರ್ಭ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾದರೆ, ಕೆಲವೊಮ್ಮೆ ಅಧಿಕ ಮಳೆಯಾಗಿದೆ.

ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್‌ಎಎಲ್‌ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 553.54 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.17ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 8877ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 694.75ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 35.17 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.67ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು 519.57ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.21ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 535.44ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 556.95ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 633.71ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+