ಕರ್ನಾಟಕದಲ್ಲಿ ತಗ್ಗಿದ ಮಳೆ ಪ್ರಮಾಣ, ಜಲಾಶಯ ಸ್ಥಿತಿ ಗತಿ
ಕರ್ನಾಟಕದ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಆದರೆ, ಮುಂದಿನ ಮುರ್ನಾಲ್ಕು ದಿನಗಳಲ್ಲಿ ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಕೊಡಗು, ಮೈಸೂರು, ಶಿವಮೊಗ್ಗ ಮುಂತಾದೆಡೆ ಯೆಲ್ಲೂ ಅಲರ್ಟ್ ನೀಡಲಾಗಿದೆ.ಬೆಂಗಳೂರಿನಲ್ಲಿ ಬಹುತೇಕ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧರ್ಮಸ್ಥಳ, ಸುಬ್ರಹ್ಮಣ್ಯ, ಕೋಟ, ಶಿರಾಲಿ, ಹಿರೆಕೆರೂರು, ಪಾಂಡವಪುರ, ಆಲೂರಿನಲ್ಲಿ ಮಳೆಯಾಗಿದೆ.ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮೈಸೂರಿನ ಕೃಷ್ಣರಾಜಸಾಗರದ ಬಳಿ ಅತ್ಯಧಿಕ 84ಮಿ. ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.8) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications