ರಾಜ್ಯದ ಕೆಲವೆಡೆ ಮಿಂಚು ಗುಡುಗು ಮಳೆ, ಅಣೆಕಟ್ಟು ನೀರಿನ ಮಟ್ಟ
ಕರ್ನಾಟಕದ ಹಲವೆಡೆ ಮಿಂಚು, ಗುಡುಗು ಸಹಿತ ಮಳೆ ಮುಂದಿನ ಮೂರ್ನಾಲ್ಕು ದಿನಗಳ ನಿರೀಕ್ಷಿಸಲಾಗಿದೆ. ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಹಗುರ, ಕರಾವಳಿ ವಲಯದಲ್ಲಿ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ ಮುಂತಾದೆಡೆ ಯೆಲ್ಲೂ ಅಲರ್ಟ್ ನೀಡಲಾಗಿದೆ.
ಯಾದಗಿರಿ, ಬೀದರ್ , ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಲಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿಯ ಹಲಗೂರಿನ ಬಳಿ ಅತ್ಯಧಿಕ 155ಮಿ. ಮೀನಷ್ಟು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.9) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications