ಅಕ್ಟೋಬರ್ 11ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಅಕ್ಟೋಬರ್ 11: ರಾಜ್ಯದ ಹಲವೆಡೆ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಳೆಗಾಲ ಆರಂಭವಾದಾಗ ಸುರಿಯದ ಮಳೆ ಕೆಲವೆಡೆ ಈಗ ಸುರಿಯುತ್ತಿದೆ. ಪರಿಣಾಮ ಜಲಾಶಯಗಳು ಭರ್ತಿಯಾಗುತ್ತಿವೆ.

ಉತ್ತರ ಅಂಡಮಾನ್‌ ಸಮುದ್ರದ ಮೇಲೆ ಸಮುದ್ರದ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಮೇಲ್ಮೈ ಸುಳಿಗಾಳಿಯೊಂದು ಸೃಷ್ಟಿಯಾಗಿದ್ದು, ಸೋಮವಾರ ಇದು ವಾಯುಭಾರ ಕುಸಿತವಾಗಿ ಪರಿವರ್ತನೆ ಆಗುವ ಸಾಧ್ಯತೆಯಿದೆ. ಆ ಬಳಿಕ ನಾಲ್ಕೈದು ದಿನದಲ್ಲಿ ಉತ್ತರ ಆಂಧ್ರ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ.

ಸೂಪಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ, ನಾರಾಯಣಪುರ, ಕಬಿನಿ, ಕೆಆರ್‌ಎಸ್, ಭದ್ರಾ, ಲಿಂಗನಮಕ್ಕಿ, ಹಾರಂಗಿ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ.

ಅದೇ ರೀತಿ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀ ವರೆಗೂ ಮೇಲ್ಮೈ ಸುಳಿಗಾಳಿಯಿದ್ದು ಇದರ ಪರಿಣಾಮ ಕರ್ನಾಟಕದ ಉತ್ತರ ಒಳನಾಡು, ಆಂಧ್ರ ಕರಾವಳಿ, ದಕ್ಷಿಣ ತೆಲಂಗಾಣ, ದಕ್ಷಿಣ ಮಹಾರಾಷ್ಟ್ರದ ಮೇಲೆ ಆಗಲಿದೆ' ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗದಲ್ಲಿ ಭರ್ಜರಿ ಮಳೆಯಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಷ್ಟೊಂದು ಬಿರುಸಾಗಿರಲಿಲ್ಲ.

ಕಲಬುರಗಿ , ಮಂಡ್ಯ , ಬಾಗಲಕೋಟೆ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗಿದೆ . ಕಲಬುರಗಿಯಲ್ಲಿ ಮಳೆಯಬ್ಬರಕ್ಕೆ ನಗರದ ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆ ಸಂಬಂಧಿ ಕಾರಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಈ ಮಧ್ಯೆ ತುಂಗಭದ್ರಾ ಡ್ಯಾಂನಿಂದ 45 ಸಾವಿರ ಕ್ಯುಸೆಕ್‌ ನೀರು ಹೊರಬಿಟ್ಟಿರುವ ಕಾರಣ ಹಂಪಿಯ ಕೆಲವು ಸ್ಮಾರಕಗಳು ಜಲಾವೃತವಾಗಿವೆ.

ಸೋಮವಾರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ , ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು , ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅ.13ರವರೆಗೂ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಾರೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಇನ್ನು ಒಂದು ವಾರ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ನೈರುತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈಶಾನ್ಯ ಹಿಂಗಾರು ಮಳೆ ಪ್ರಾರಂಭವಾಗುವ ಪರ್ವ ಕಾಲದಲ್ಲಿ ನಿರಂತರ ಮಳೆ ಮುಂದುವರೆಯುವುದು ಸಹಜ ಪ್ರಕ್ರಿಯೆ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

 ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು 553.47 ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.11ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು 887.52ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯದ ಮಟ್ಟ

ಕಬಿನಿ ಜಲಾಶಯದ ಮಟ್ಟ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು 694.51ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮಟ್ಟ 35.34 ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.73ರಷ್ಟಿದ್ದು, ಇಂದಿನ ಮಟ್ಟ 657.73ರಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.71 ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.56ರಷ್ಟಿದ್ದರೂ ಇಂದು 519.57ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.4ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದ ನೀರಿನ ಮಟ್ಟ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ, 557.05ರಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 556.58ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು, 662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 633.79ನೀರು ಸಂಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+