ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಬಹರ ಕುಸಿತದಿಂದಾಗಿ ಕರ್ನಾಟಕದ ಹಲವೆಡೆ ಮಿಂಚು, ಗುಡುಗು ಸಹಿತ ಮಳೆ ಇನ್ನೆರಡು ದಿನಗಳು ಮುಂದುವರೆಯಲಿದೆ. ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಹಗುರ, ಕರಾವಳಿ ವಲಯದಲ್ಲಿ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ
ಬಾಗಲಕೋಟೆ, ರಾಯಚೂರು, ಧಾರವಾಡ, ಯಾದಗಿರಿ, ಬೀದರ್ , ಕಲಬುರಗಿ, ವಿಜಯಪುರ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಪೂರ್ವದ ಕಾಡುಗೋಡಿಯಲ್ಲಿ 138ಮಿ. ಮೀನಷ್ಟು ಮಳೆಯಾಗಿದೆ, ಚಿತ್ರದುರ್ಗದ ಹಿರೇಗುಂಟನೂರು ಎಂಬಲ್ಲಿ 159. 5 ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.11) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications