ಮುಂದುವರೆದ ಮಳೆ ಆರ್ಭಟ, ಅಣೆಕಟ್ಟಿಗಳಲ್ಲಿ ನೀರೆಷ್ಟಿದೆ?
ಕರ್ನಾಟಕದ ಹಲವೆಡೆ ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಸಾಧಾರಣ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಇನ್ನೊಂದೆರಡು ದಿನಗಳ ಕಾಲ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ, ತಾಲೂಕುವಾರು ವಿವರ
ಬಾಗಲಕೋಟೆ, ರಾಯಚೂರು, ಧಾರವಾಡ, ಯಾದಗಿರಿ, ಬೀದರ್ , ಕಲಬುರಗಿ, ವಿಜಯಪುರ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ, ಹಳ್ಳ, ಕೊಳ್ಳ ತುಂಬಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ದಕ್ಷಿಣದ ದೊರೆಸಾನಿಪಾಳ್ಯದ 20 ಮಿ. ಮೀನಷ್ಟು ಮಳೆಯಾಗಿದೆ, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕಲಭಾಗ ಎಂಬಲ್ಲಿ 159. 5 ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.12) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ
ಮುನ್ಸೂಚನೆ
ಮಳೆ
ಮುನ್ಸೂಚನೆ:
ರಾಜ್ಯದ
ಉತ್ತರ
ಹಾಗೂ
ದಕ್ಷಿಣ
ಒಳನಾಡು
ಮತ್ತು
ಕರಾವಳಿ
ಜಿಲ್ಲೆಗಳಲ್ಲಿ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮದಿಂದ
ಅಧಿಕ
ಮಳೆ.
ಮಲೆನಾಡು
ಜಿಲ್ಲೆಗಳಲ್ಲಿ
ಚದುರಿದಿಂದ
ವ್ಯಾಪಕವಾಗಿ
ಸಾಧರಣ
ಮಳೆ
ಹಾಗೂ
ಅಲ್ಲಲ್ಲಿ
ಉತ್ತಮದಿಂದ
ಅಧಿಕ
ಮಳೆ.
ರಾಜ್ಯದಾದ್ಯಂತ
ಅಲ್ಲಲ್ಲಿ
ಮಿಂಚಿನೊಂದಿಗೆ
ಗುಡುಗು
ಸಂಭವಿಸುವ
ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ
ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.
ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.