ಮುಂದುವರೆದ ಮಳೆ, ಜಲಾಶಯಗಳ ನೀರಿನ ಮಟ್ಟ ವಿವರ
ಕರ್ನಾಟಕದ ಕರಾವಳಿ, ಮಳೆನಾಡು, ದಕ್ಷಿಣ ಒಳನಾಡು ಸೇರಿದಂತೆ ಅಕ್ಟೋಬರ್ 15ರವರೆಗೆ ಹಲವೆಡೆ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಯಲಹಂಕದಲ್ಲಿ 12 ಮಿ. ಮೀನಷ್ಟು ಮಳೆಯಾಗಿದೆ, ಬಳ್ಳಾರಿ ಜಿಲ್ಲೆಯ ಸಂಡೂರಿನ ಯಶವಂತನಗರ ಎಂಬಲ್ಲಿ 114 ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.13) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅತ್ಯಧಿಕ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ : ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications