ಮಳೆ, ಪ್ರವಾಹ ಭೀತಿಯಲ್ಲಿ ಕರ್ನಾಟಕ, ಜಲಾಶಯಗಳು ಭರ್ತಿ
ಕರ್ನಾಟಕದ ಕರಾವಳಿ, ಮಳೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಮುಂದಿನ 12 ಗಂಟೆಗಳ ಕಾಲ ಕರ್ನಾಟಕದ ಉತ್ತರ ಒಳನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಲವಾದ ಗಾಳಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಮತ್ತು ಬಳಿಕ ಅದರ ವೇಗ ತಗ್ಗಲಿದೆ ಎಂದು ಇಲಾಖೆ ಹೇಳಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾಪುರದ ಬಳಕೂರು ಎಂಬಲ್ಲಿ 284ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.15) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಹಾಗೂ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications