ರಾಜ್ಯದಲ್ಲಿ ಮಳೆ ಮುಂದುವರಿಕೆ, ಅಣೆಕಟ್ಟಿನ ನೀರಿನ ಮಟ್ಟ
ಕರ್ನಾಟಕದ ಕರಾವಳಿ, ಮಳೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಇನ್ನೆರಡು ದಿನ ಮಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸಗಡಗೇರಿ ಎಂಬಲ್ಲಿ 75.5ಮಿ.ಮೀ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಬೆಂಗಳೂರಿನಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.16) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications