ಉತ್ತರದಲ್ಲಿ ಮಳೆ ಅಬ್ಬರ, ಜಲಾಶಯಗಳ ನೀರಿನ ಮಟ್ಟ ವಿವರ
ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಕೊಪ್ಪಳ,ಬಳ್ಳಾರಿ, ಹಾವೇರಿ, ಮಧ್ಯ ಕರ್ನಾಟಕ ಭಾಗದ ದಾವಣಗೆರೆ, ಚಿತ್ರದುರ್ಗ ಹಾಗೂ ಉತ್ತರ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಕಾರಣ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಹಲವೆಡೆ ಸುರಿಯಲಿದ್ದು, ಬೆಂಗಳೂರಿನಲ್ಲಿ ನಿನ್ನೆ 8 ಗಂಟೆಗಳಲ್ಲಿ 66 ಮಿ.ಮೀಗೂ ಅಧಿಕ ಮಳೆ ಸುರಿದಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲದೇವನಹಳ್ಳಿಯಲ್ಲಿ 166ಮಿ.ಮೀ ಸುರಿದಿದೆ, ಬೆಂಗಳೂರಿನ ಕೆಂಗೇರಿಯಲ್ಲಿ 124.5 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಬೆಂಗಳೂರಿನಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.21) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications