ಇನ್ನೂ ಮೂರು ದಿನಗಳ ಕಾಲ ಮಳೆ, ಜಲಾಶಯ ಮಾಹಿತಿ
ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯಲಿದೆ. ದಕ್ಷಿಣ ಒಳನಾಡು ಪ್ರದೇಶಗಳು ಸೇರಿ ಒಟ್ಟು 12 ಜಿಲ್ಲೆಗಳಲ್ಲಿ ಯೆಲ್ಲೊಅಲರ್ಟ್ ಜಾರಿಯಲ್ಲಿರಲಿದೆ. ಬೆಂಗಳೂರಿನಲ್ಲಿ ಶುಕ್ರವಾರ, ಶನಿವಾರ ಯೆಲ್ಲೂ ಅಲರ್ಟ್ ನೀಡಲಾಗಿದೆ.
ವಾಯುಭಾರ ಕುಸಿದ ಕಾರಣ ಮಳೆ ಹಲವೆಡೆ ಸುರಿಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಬೆಂಗಳೂರು ದಕ್ಷಿಣ ಜಿಲ್ಲೆಯ ನಾಗರಬಾವಿಯಲ್ಲಿ 43.5ಮಿ.ಮೀ ಸುರಿದಿದೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ದೊಡ್ಡಘಟ್ಟದಲ್ಲಿ 125.5 ಮಿ.ಮೀ ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಇಂದಿನ (ಅ.23) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.
ರಾಜ್ಯದೆಲ್ಲೆಡೆ ಭರ್ಜರಿ ಮಳೆ, ಜಲಾಶಯಗಳ ನೀರಿನ ಪ್ರಮಾಣ
ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ
ಮಳೆ ಮುನ್ಸೂಚನೆ
ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ
ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ

ಕೃಷ್ಣರಾಜಸಾಗರ, ಭದ್ರಾ, ಕಬಿನಿ
ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ
ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ
ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.












Click it and Unblock the Notifications