ಸೆಪ್ಟೆಂಬರ್ 11ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿಯಲಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ 15ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್ ಗಡ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳದೆ ಎರಡು ದಿನಗಳಿಂದಲೂ ಮಳೆಯಾಗುತ್ತಿದೆ ಎಂದೂ ಇಲಾಖೆ ವರದಿ ಹೇಳಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್​ಗಢ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.

ಪ್ರಮುಖವಾಗಿ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇತ್ತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಯಾವ ಜಲಾಶಯದಲ್ಲಿ ಎಷ್ಟು ನೀರು ಸಂಗ್ರಹ ಸಾಮರ್ಥ್ಯವಿದೆ, ಯಾವ ಜಲಾಶಯದಲ್ಲಿ ಈಗ ಎಷ್ಟು ನೀರಿದೆ ಎಂಬುದರ ಮಾಹಿತಿ ಇಲ್ಲಿದೆ. ವಿನ್ಯಾಸ ಭರತ್ ಎಚ್‌ಸಿ

 ಲಿಂಗನಮಕ್ಕಿ ಜಲಾಶಯ

ಲಿಂಗನಮಕ್ಕಿ ಜಲಾಶಯ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 554.44 ಮೀಟರ್ ಇದ್ದು, ಇಂದು552.94ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.10ರಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು888.58ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.50ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ35.51ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.59ರಷ್ಟಿದ್ದು, ಇಂದಿನ ಮಟ್ಟ 655.67ಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು 497.69ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು519.55ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.12ಮೀಟರ್‌ನಷ್ಟು ನೀರಿದೆ.

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ548.75ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 555.85 ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,661.89ರಷ್ಟು ನೀರಿದೆ, ಮಲಪ್ರಭಾದಲ್ಲಿ 662.91 ಮೀಟರ್‌ ನೀರಿನ ಸಾಮರ್ಥ್ಯವಿದ್ದು, 633.71ನೀರು ಸಂಗ್ರಹವಾಗಿದೆ. ಕ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+