ಮತ್ತೆ ಮಳೆ ಆರಂಭ; ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಮಟ್ಟ

ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಸುರಿಯಲು ಆರಂಭಿಸಿದೆ. ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿವೆ. ರಾಜ್ಯದ ಬಹುತೇಕ ಎಲ್ಲೆಡೆ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಭಾಗದಲ್ಲಿ ಅಲ್ಲಲ್ಲಿ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮತ್ತೆ ಮಳೆ ಆರಂಭಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವೇ ಕಾರಣ ಎಂದು ಇಲಾಖೇ ತಿಳಿಸಿದೆ.

ಪ್ರಮುಖ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮಳೆ ಮತ್ತೆ ಶುರುವಾಗಿದೆ. ಇದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣ ಕಡಿಮೆ ಇದೆ. ಜುಲೈನಲ್ಲಿ ಭಾರೀ ಮಳೆಯಿಂದಾಗಿ ಗಣನೀಯ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬಂದಿತ್ತು. ನಂತರ ಮಳೆ ಪ್ರಮಾಣ ತಗ್ಗಿದರೂ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದವು.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿ ಎಂಬಲ್ಲಿ ಅತ್ಯಧಿಕ 147 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ನಿನ್ನೆ ಸೂಪಾ-ಕ್ಯಾಸಲ್ ರಾಕ್ ಪ್ರದೇಶದಲ್ಲಿ 85.5 ಮಿ.ಮೀ ಮಳೆ ದಾಖಲಾಗಿತ್ತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆಪ್ಟೆಂಬರ್ 13) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಬಹುತೇಕ 25-27 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಲಿಂಗನಮಕ್ಕಿ ಜಲಾಶಯದ ಸೋಮವಾರದ ನೀರಿನ ಮಟ್ಟ 553.26ಮೀಟರ್ ಆಗಿದೆ. ಡ್ಯಾಂ ಗರಿಷ್ಠ ಮಟ್ಟ 554.44 ಮೀಟರ್(ಸಮುದ್ರ ಮಟ್ಟದಿಂದ). ಜಲಾಶಯಕ್ಕೆ ಒಳಹರಿವು 33,258 ಕ್ಯೂಸೆಕ್. ಹೊರ ಹರಿವು 5,710 ಕ್ಯೂಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 871.18 ಮೀಟರ್. ಡ್ಯಾಂಗೆ 3928 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 3968 ಕ್ಯೂಸೆಕ್ ದಾಖಲಾಗಿದೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 888.72ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 9601 ಕ್ಯೂಸೆಕ್, ಸೋಮವಾರದ ಹೊರ ಹರಿವು 5222 ಕ್ಯುಸೆಕ್.

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕಬಿನಿ ಜಲಾಶಯದ ಸೋಮವಾರದ ನೀರಿನ ಮಟ್ಟ 695.85 ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. 8483 ಕ್ಯುಸೆಕ್ ಒಳಹರಿವು ಇದ್ದು, 1950 ಹೊರಹರಿವು ಕ್ಯುಸೆಕ್ ದಾಖಲಾಗಿದೆ.

ಮಂಡ್ಯದ ಕೆಆರ್‌ಎಸ್ ಜಲಾಶಯದ ಸೋಮವಾರದ ನೀರಿನ ಮಟ್ಟ 35.42ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಡ್ಯಾಂಗೆ ಒಳಹರಿವು 8902 ಕ್ಯುಸೆಕ್ ಆಗಿದ್ದು, ಹೊರ ಹರಿವು 10894 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 657.61 ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಡ್ಯಾಂ ಒಳಹರಿವು 7781 ಕ್ಯುಸೆಕ್ ಹಾಗೂ 6867 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ ಜಲಾಶಯದ ಸೋಮವಾರದ ನೀರಿನ ಮಟ್ಟ 497.68ಮೀಟರ್ ಇದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 17,656 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 18,992 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಸೋಮವಾರದ ನೀರಿನ ಮಟ್ಟ 519.54 ಮೀಟರ್. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. 53,516 ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 55553ಕ್ಯುಸೆಕ್.

ನಾರಾಯಣಪುರ ಜಲಾಶಯದ ಸೋಮವಾರದ ನೀರಿನ ಮಟ್ಟ 491.09ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 61521ಕ್ಯುಸೆಕ್, ಹೊರ ಹರಿವು 49235ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಸೂಪಾ ಜಲಾಶಯದ ಸೋಮವಾರದ ನೀರಿನ ಮಟ್ಟ 556.25ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 14,495 ಕ್ಯುಸೆಕ್ ಇದ್ದು, ಹೊರ ಹರಿವು 1736 ಕ್ಯುಸೆಕ್.

ಘಟಪ್ರಭಾ ಜಲಾಯಶದ ಸೋಮವಾರದ ನೀರಿನ ಮಟ್ಟ 662.91 ಮೀಟರ್. ಡ್ಯಾಂ ಪೂರ್ಣ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 11243ಕ್ಯುಸೆಕ್. ಹೊರ ಹರಿವು 11243ಕ್ಯುಸೆಕ್.

ಮಲಪ್ರಭಾ ಜಲಾಶಯದ ಇಂದಿನ ನೀರಿನ ಮಟ್ಟ 633.80 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ 5026ಕ್ಯುಸೆಕ್ ಒಳಹರಿವು, 2594ಕ್ಯುಸೆಕ್ ಹೊರಹರಿವು ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+