ಕರ್ನಾಟಕದ ಮುಖ್ಯ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟ

ಮತ್ತೆ ಮಳೆ ಆರಂಭವಾಗಿದ್ದು, ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿವೆ. ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುರ್ನಾಲ್ಕು ದಿನಗಳ ಕಾಲ ಮಳೆ ಬೀಳಲಿದೆ. ರಾಜ್ಯದ ಬಹುತೇಕ ಎಲ್ಲೆಡೆ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಅಲ್ಲದೇ ಇತರೆಡೆ ಕೂಡಾ ಭಾಗಶಃ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆ ಆರಂಭವಾಗಿದೆ ಎಂದು ಇಲಾಖೆ ತಿಳಿಸಿದೆ.

ಪ್ರಮುಖ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮಳೆ ಮತ್ತೆ ಶುರುವಾಗಿರುವುದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂಗಾರು ಋತುವಿನಲ್ಲಿ ಭಾರೀ ಮಳೆಯಿಂದಾಗಿ ಗಣನೀಯ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬಂದಿತ್ತು. ನಂತರ ಮಳೆ ಪ್ರಮಾಣ ತಗ್ಗಿದರೂ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ.

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದ ಖೈರಗುಂದ ಎಂಬಲ್ಲಿ ಅತ್ಯಧಿಕ 201 ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರ ಬಸ್ತಿಕೇರಿಯಲ್ಲಿ 147 ಮಿ.ಮೀ ಮಳೆ ದಾಖಲಾಗಿತ್ತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆಪ್ಟೆಂಬರ್ 14) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ. (ಅಂಕಿ ಅಂಶ ಕೃಪೆ: KSNMDC); ವಿನ್ಯಾಸ: ಭರತ್ ಎಚ್. ಸಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ. ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಲಿಂಗನಮಕ್ಕಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 553.46ಮೀಟರ್ ಆಗಿದೆ. ಡ್ಯಾಂ ಗರಿಷ್ಠ ಮಟ್ಟ 554.44 ಮೀಟರ್(ಸಮುದ್ರ ಮಟ್ಟದಿಂದ). ಜಲಾಶಯಕ್ಕೆ ಒಳಹರಿವು 29, 400 ಕ್ಯೂಸೆಕ್. ಹೊರ ಹರಿವು 4,235 ಕ್ಯೂಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 871.26 ಮೀಟರ್. ಡ್ಯಾಂಗೆ 5024 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 3850 ಕ್ಯೂಸೆಕ್ ದಾಖಲಾಗಿದೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 888.86 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 9960 ಕ್ಯೂಸೆಕ್, ಮಂಗಳವಾರದ ಹೊರ ಹರಿವು 5222 ಕ್ಯುಸೆಕ್.

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕಬಿನಿ ಜಲಾಶಯದ ಮಂಗಳವಾರದ ನೀರಿನ ಮಟ್ಟ 696.00 ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. 12, 906 ಕ್ಯುಸೆಕ್ ಒಳಹರಿವು ಇದ್ದು, 9,171 ಹೊರಹರಿವು ಕ್ಯುಸೆಕ್ ದಾಖಲಾಗಿದೆ.

ಮಂಡ್ಯದ ಕೆಆರ್‌ಎಸ್ ಜಲಾಶಯದ ಮಂಗಳವಾರದ ನೀರಿನ ಮಟ್ಟ 35.49ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಡ್ಯಾಂಗೆ ಒಳಹರಿವು 14,052ಕ್ಯುಸೆಕ್ ಆಗಿದ್ದು, ಹೊರ ಹರಿವು 10,896 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 657.59ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಡ್ಯಾಂ ಒಳಹರಿವು 14, 296 ಕ್ಯುಸೆಕ್ ಹಾಗೂ 15, 812 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 497.67ಮೀಟರ್ ಇದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 14,894 ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 16, 675 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.52 ಮೀಟರ್. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. 67,030 ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 71,092ಕ್ಯುಸೆಕ್.

ನಾರಾಯಣಪುರ ಜಲಾಶಯದ ಮಂಗಳವಾರದ ನೀರಿನ ಮಟ್ಟ 491.96ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 82,297ಕ್ಯುಸೆಕ್, ಹೊರ ಹರಿವು 89, 286ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಸೂಪಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 556.68ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 21,849 ಕ್ಯುಸೆಕ್ ಇದ್ದು, ಹೊರ ಹರಿವು 2828 ಕ್ಯುಸೆಕ್.

ಘಟಪ್ರಭಾ ಜಲಾಶಯದ ಮಂಗಳವಾರದ ನೀರಿನ ಮಟ್ಟ 662.91 ಮೀಟರ್. ಡ್ಯಾಂ ಪೂರ್ಣ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 13407 ಕ್ಯುಸೆಕ್. ಹೊರ ಹರಿವು 13407 ಕ್ಯುಸೆಕ್.

ಮಲಪ್ರಭಾ ಜಲಾಶಯದ ಇಂದಿನ ನೀರಿನ ಮಟ್ಟ 633.80 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ 4019ಕ್ಯುಸೆಕ್ ಒಳಹರಿವು, 4019ಕ್ಯುಸೆಕ್ ಹೊರಹರಿವು ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+