ಸೆಪ್ಟೆಂಬರ್ 16ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 16: ಕಳೆದ ಹದಿನೈದು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದೆ. ಜಲಾಶಯಗಳು ಕೂಡ ಬಹುತೇಕ ಭರ್ತಿಯಾಗಿವೆ.

ಭದ್ರಾ ಜಲಾಶಯದ ಒಳಹರಿವು 7,800 ಕ್ಯೂಸೆಕ್‌ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಮತ್ತೊಮ್ಮೆ ತೆರೆದು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು 33 ಸಾವಿರ ಕ್ಯೂಸೆಕ್‌ಗೆ ಮತ್ತು ತುಂಗಾ ನದಿಯ ಹರಿವು 20 ಸಾವಿರ ಕ್ಯೂಸೆಕ್‌ಗೆ ಏರಿದೆ.

ಶರಾವತಿ ಜಲಾಯನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ನಿರಂತರ ಮಳೆ ಸುರಿಯುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ 33,258 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಎರಡು ದಿನಗಳ ಹಿಂದೆ ಅಂದರೆ ಸೋಮವಾರ ಬೆಳಗ್ಗೆ 8 ಗಂಟೆಗೆ ನೀರಿನ ಮಟ್ಟ 1815.25 ಅಡಿಗೆ ತಲುಪಿದೆ. ಜಲಾಶಯ ಭರ್ತಿಗೆ ಕೇವಲ 3.75 ಅಡಿ ನೀರು ಬೇಕಿದೆ. ಇದೇ ರೀತಿ ಮಳೆ ಮುಂದುವರಿದಲ್ಲಿ ಯಾವುದೇ ಕ್ಷಣದಲ್ಲಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಡ್ಯಾಂ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುವುದು. ನದಿ ಅಕ್ಕಪಕ್ಕ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ವಿದ್ಯುತ್‌ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಅಬ್ಬರ ಮಿತಿ ಮೀರಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.

ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ಮಳೆಯ ಆರ್ಭಟ ಇರಲಿದೆ. ಭೀಮಾ ನದಿಯಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಭೀಮಾ‌ ನದಿ ತೀರಕ್ಕೆ ಯಾರೂ ತೆರಳದಂತೆ ಹಾಗೂ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ದಟ್ಟವಾಗಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನೈಋತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್, ಕೊಲ್ಲೂರು, ಕೊಟ್ಟಿಗೆಹಾರ, ಆಗುಂಬೆ, ಕಾರ್ಕಳ, ಶಿರಾಲಿ, ಕಮ್ಮರಡಿ, ಉಡುಪಿ, ಮುಲ್ಕಿ, ಕದ್ರಾ, ಭಟ್ಕಳ, ಹೊನ್ನಾವರ, ಲಿಂಗನಮಕ್ಕಿ, ಸಿದ್ದಾಪುರ, ಕೋಟ, ಧರ್ಮಸ್ಥಳ, ಬೆಳ್ತಂಗಡಿ, ಮಾಣಿ, ಸುಬ್ರಹ್ಮಣ್ಯ, ಕಳಸ, ಜಯಪುರ, ಸೊರಬ, ಮಂಡಗದ್ದೆ, ಭಾಗಮಂಡಲದಲ್ಲಿ ಮಳೆಯಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಒರಿಸ್ಸಾ, ಗುಜರಾತ್, ಮಧ್ಯಪ್ರದೇಶ, ಅಸ್ಸಾಂನಲ್ಲಿ ಸೆ. 17ರವರೆಗೆ ಮಳೆಯ ಅಬ್ಬರವಿರಲಿದೆ.

 ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 550.66ಮೀಟರ್ ಇದ್ದು, ಇಂದು553.61ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.22ಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.05 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.92ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ35.65ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.55ರಷ್ಟಿದ್ದು, ಇಂದಿನ ಮಟ್ಟ 657.45ಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು497.67ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು519.05ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 491.50

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ557.00ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662. 91ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80ಮೀಟರ್‌ ನೀರಿನ ಸಾಮರ್ಥ್ಯವಿದ್ದು, 633.80ನೀರು ಸಂಗ್ರಹವಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+