ಸೆಪ್ಟೆಂಬರ್ 18ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು, ಸೆಪ್ಟೆಂಬರ್ 18: ರಾಜ್ಯದಲ್ಲಿ ಪ್ರಮುಖ ಜಲಾಶಯಗಳು ಭತಿಯಾಗಿವೆ. ಇನ್ನೂ ಅನೇಕ ಜಲಾಶಯಗಳು ಖಾಲಿ ಇವೆ. ರಾಜ್ಯದಲ್ಲಿ ಸೆಪ್ಟೆಂಬರ್ 21 ರವರೆಗೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 21ರಂದು ಅಧಿಕ ಮಳೆ ಸುರಿಯಲಿದೆ ಎನ್ನಲಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ.21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೊತೆಗೆ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ , ಹಾಸನ ಭಾಗಗಳಲ್ಲೂ ಅಧಿಕ ಮಳೆಯಾಗಲಿದೆ. ಇನ್ನು, ಉತ್ತರ ಒಳನಾಡುಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಸೆ.18 ಮತ್ತು 19ರಂದು ಸಹ ಮಳೆ ಮುಂದುವರೆಯಲಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಮತ್ತು ನೈರುತ್ಯ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ

ಲಿಂಗನ ಮಕ್ಕಿಯಲ್ಲಿ ಪೂರ್ಣಮಟ್ಟ 550.66ಮೀಟರ್ ಇದ್ದು, ಇಂದು553.61ಮೀಟರ್ ಇದೆ. ಹಾರಂಗಿಯಲ್ಲಿ ಪೂರ್ಣಮಟ್ಟ 871.38 ಮೀಟರ್ ಇದ್ದು, ಇಂದು 871.23ಷ್ಟಿದೆ. ಇನ್ನು ಹೇಮಾವತಿಯಲ್ಲಿ ನೀರಿನ ಮಟ್ಟ 890.58 ಮೀಟರ್ ಇದ್ದು ಇಂದು889.03 ಮೀಟರ್‌ನಷ್ಟಿದೆ.

 ಕಬಿನಿ ಜಲಾಶಯ

ಕಬಿನಿ ಜಲಾಶಯ

ಕಬಿನಿಯಲ್ಲಿ ಪೂರ್ಣ ಮಟ್ಟ 696.13 ಮೀಟರ್‌ನಷ್ಟಿದ್ದು, ಇಂದು695.95ರಷ್ಟಿದೆ, ಕೆಆರ್‌ಎಸ್‌ನಲ್ಲಿ 38.04 ಸಾಮರ್ಥ್ಯವಿದ್ದು ನೀರಿನ ಮ35.58ಮೀಟರ್‌ನಷ್ಟಿದೆ, ಭದ್ರಾದಲ್ಲಿ ನೀರಿನ ಸಾಮರ್ಥ್ಯ 657.55ರಷ್ಟಿದ್ದು, ಇಂದಿನ ಮಟ್ಟ 657.55ಷ್ಟಿದೆ.

 ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯ ತುಂಗಭದ್ರದಲ್ಲಿ 497.71 ಮೀಟರ್ ಸಾಮರ್ಥ್ಯವಿದ್ದು, ಇಂದು497.71ಮೀಟರ್‌ನಷ್ಟು ನೀರಿದೆ, ಆಲಮಟ್ಟಿಯಲ್ಲಿ ಸಾಮರ್ಥ್ಯ 519.60ರಷ್ಟಿದ್ದರೂ ಇಂದು519.47ಮೀಟರ್‌ನಷ್ಟಿದೆ. ಇನ್ನು ನಾರಾಯಣಪುರದಲ್ಲಿ 492.25ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದರೂ 492.12

 ಸೂಪಾ ಜಲಾಶಯ

ಸೂಪಾ ಜಲಾಶಯ

ಸೂಪಾ ಜಲಾಶಯದಲ್ಲಿ 564.00 ನೀರಿನ ಸಾಮರ್ಥ್ಯ ಹೊಂದಿದೆ557.09ಷ್ಟು ನೀರು ಸಂಗ್ರಹವಾಗಿದೆ. ಘಟಪ್ರಭಾದಲ್ಲಿ 662. 91ಮೀಟರ್‌ನಷ್ಟು ನೀರಿನ ಸಾಮರ್ಥ್ಯವಿದ್ದು,662.91ರಷ್ಟು ನೀರಿದೆ, ಮಲಪ್ರಭಾದಲ್ಲಿ 633.80ಮೀಟರ್‌ ನೀರಿನ ಸಾಮರ್ಥ್ಯವಿದ್ದು, 633.80ನೀರು ಸಂಗ್ರಹವಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+