ಮಳೆ ಶುರುವಾದಂತೆ ಜಲಾಶಯಗಳಲ್ಲಿನ ನೀರಿನ ಮಟ್ಟ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದೆ. ಇನ್ನು ನಾಲ್ಕೈದು ದಿನ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಪ್ರಮುಖ ಜಲಾಶಯಗಳ ಜಲಾನಯನ ಭಾಗಗಳಲ್ಲಿ ಮಳೆ ಮತ್ತೆ ಶುರುವಾಗಿರುವುದರಿಂದ ಜಲಾಶಯಗಳ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮುಂಗಾರು ಋತುವಿನಲ್ಲಿ ಭಾರೀ ಮಳೆಯಿಂದಾಗಿ ಗಣನೀಯ ಪ್ರಮಾಣದಲ್ಲಿ ಜಲಾಶಯಗಳಿಗೆ ನೀರು ಹರಿದು ಬಂದಿತ್ತು.

ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜಂಗಮಕೋಟೆ ಎಂಬಲ್ಲಿ ಅತ್ಯಧಿಕ 76.5ಮಿ.ಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ. ಮೊನ್ನೆವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ 158 ಮಿ.ಮೀ ಮಳೆ ದಾಖಲಾಗಿತ್ತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಕರ್ನಾಟಕದಲ್ಲಿ ಇಂದಿನ (ಸೆಪ್ಟೆಂಬರ್ 22) ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಮಳೆ ಮುನ್ಸೂಚನೆ ಬಗ್ಗೆ ಮುಂದೆ ವಿವರವಾಗಿ ತಿಳಿಯಿರಿ.

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಕರ್ನಾಟಕದ ಹವಾಮಾನ ವರದಿ, ಅಣೆಕಟ್ಟುಗಳ ವಿವರ

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ

ಹೇಮಾವತಿ, ಲಿಂಗನಮಕ್ಕಿ, ಹಾರಂಗಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ..

ಲಿಂಗನಮಕ್ಕಿ ಜಲಾಶಯದ ಬುಧವಾರದ ನೀರಿನ ಮಟ್ಟ 553.54ಮೀಟರ್ ಆಗಿದೆ. ಡ್ಯಾಂ ಗರಿಷ್ಠ ಮಟ್ಟ 554.44 ಮೀಟರ್(ಸಮುದ್ರ ಮಟ್ಟದಿಂದ). ಜಲಾಶಯಕ್ಕೆ ಒಳಹರಿವು 4,071ಕ್ಯೂಸೆಕ್. ಹೊರ ಹರಿವು 6,423ಕ್ಯೂಸೆಕ್.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್ ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 871.30ಮೀಟರ್. ಡ್ಯಾಂಗೆ 1377ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರ ಹರಿವು 1574ಕ್ಯೂಸೆಕ್ ದಾಖಲಾಗಿದೆ.

ಹೇಮಾವತಿ ಜಲಾಶಯದ ಇಂದಿನ ನೀರಿನ ಮಟ್ಟ 888.73 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್ ಆಗಿದೆ. ಡ್ಯಾಂಗೆ ಒಳಹರಿವು 2178ಕ್ಯೂಸೆಕ್, ಬುಧವಾರದ ಹೊರ ಹರಿವು 5130 ಕ್ಯುಸೆಕ್.

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ

ಕೃಷ್ಣರಾಜಸಾಗರ, ಭದ್ರಾ, ಕಬಿನಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಕಬಿನಿ ಜಲಾಶಯದ ಬುಧವಾರದ ನೀರಿನ ಮಟ್ಟ 695.92 ಮೀಟರ್. ಜಲಾಶಯದ ಪೂರ್ಣ ಮಟ್ಟ 696.13 ಮೀಟರ್ ಆಗಿದೆ. 1799 ಕ್ಯುಸೆಕ್ ಒಳಹರಿವು ಇದ್ದು, 1,900 ಹೊರಹರಿವು ಕ್ಯುಸೆಕ್ ದಾಖಲಾಗಿದೆ.

ಮಂಡ್ಯದ ಕೆಆರ್‌ಎಸ್ ಜಲಾಶಯದ ಬುಧವಾರದ ನೀರಿನ ಮಟ್ಟ 35.07 ಮೀಟರ್. ಡ್ಯಾಂ ಪೂರ್ಣ ಮಟ್ಟ 38.04 ಮೀಟರ್. ಡ್ಯಾಂಗೆ ಒಳಹರಿವು 5,032ಕ್ಯುಸೆಕ್ ಆಗಿದ್ದು, ಹೊರ ಹರಿವು 10,683 ಕ್ಯುಸೆಕ್ ದಾಖಲಾಗಿದೆ.

ಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 657.50ಮೀಟರ್. ಜಲಾಶಯದ ಪೂರ್ಣಮಟ್ಟ 657.73 ಮೀಟರ್. ಡ್ಯಾಂ ಒಳಹರಿವು 3,019 ಕ್ಯುಸೆಕ್ ಹಾಗೂ 3,621 ಕ್ಯುಸೆಕ್ ಹೊರಹರಿವು ಇದೆ.

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ

ಬಸವಸಾಗರ(ನಾರಾಯಣಪುರ), ತುಂಗಭದ್ರಾ, ಆಲಮಟ್ಟಿ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ತುಂಗಭದ್ರಾ ಜಲಾಶಯದ ಬುಧವಾರದ ನೀರಿನ ಮಟ್ಟ 497.68ಮೀಟರ್ ಇದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 14,121ಕ್ಯುಸೆಕ್ ಒಳಹರಿವು ಇದ್ದು, ಹೊರ ಹರಿವು 14, 106 ಕ್ಯುಸೆಕ್ ಆಗಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಮಂಗಳವಾರದ ನೀರಿನ ಮಟ್ಟ 519.57 ಮೀಟರ್. ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. 10, 945 ಕ್ಯುಸೆಕ್ ನೀರು ಬರುತ್ತಿದ್ದು, ಹೊರ ಹರಿವು 10, 945ಕ್ಯುಸೆಕ್.

ನಾರಾಯಣಪುರ ಜಲಾಶಯದ ಬುಧವಾರದ ನೀರಿನ ಮಟ್ಟ 491.98 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 14919ಕ್ಯುಸೆಕ್, ಹೊರ ಹರಿವು 11,724ಕ್ಯುಸೆಕ್.

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ

ಸೂಪಾ, ಘಟಪ್ರಭಾ, ಮಲಪ್ರಭಾ ಅಣೆಕಟ್ಟಿನ ಪೂರ್ಣ ಮಟ್ಟ ಹಾಗೂ ಇಂದಿನ ಮಟ್ಟದ ವಿವರ ಇಲ್ಲಿದೆ.

ಸೂಪಾ ಜಲಾಶಯದ ಬುಧವಾರದ ನೀರಿನ ಮಟ್ಟ 557.03ಮೀಟರ್. ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯಕ್ಕೆ ಒಳಹರಿವು 2811ಕ್ಯುಸೆಕ್ ಇದ್ದು, ಹೊರ ಹರಿವು 2811 ಕ್ಯುಸೆಕ್.

ಘಟಪ್ರಭಾ ಜಲಾಶಯದ ಬುಧವಾರದ ನೀರಿನ ಮಟ್ಟ 662.91 ಮೀಟರ್. ಡ್ಯಾಂ ಪೂರ್ಣ ಮಟ್ಟ 662.91 ಮೀಟರ್. ಜಲಾಶಯದ ಒಳಹರಿವು 2391ಕ್ಯುಸೆಕ್. ಹೊರ ಹರಿವು 2391 ಕ್ಯುಸೆಕ್.

ಮಲಪ್ರಭಾ ಜಲಾಶಯದ ಇಂದಿನ ನೀರಿನ ಮಟ್ಟ 633.77 ಮೀಟರ್. ಜಲಾಶಯದ ಪೂರ್ಣ ಮಟ್ಟ 633.80 ಮೀಟರ್. ಜಲಾಶಯಕ್ಕೆ 574ಕ್ಯುಸೆಕ್ ಒಳಹರಿವು, 2194ಕ್ಯುಸೆಕ್ ಹೊರಹರಿವು ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+