ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹವಾಮಾನ ವರದಿ: ಯಾವ ಜಿಲ್ಲೆಯಲ್ಲಿ ಉಷ್ಣಾಂಶ ಹೇಗಿದೆ?

|
Google Oneindia Kannada News

ಬೆಂಗಳೂರು, ಮೇ 28: ಯಾಸ್ ಚಂಡಮಾರುತ ಪ್ರಭಾವದಿಂದಾಗಿ ತೀರಾ ಮಳೆಯಾಗದಿದ್ದರೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ರಾಮನಗರದಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather Report May 28: Rain Will Continue Till May 31

ಮಲೆನಾಡಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದು, ತಡವಾಗಿ ಸೂರ್ಯ ಕಾಣಿಸಿಕೊಳ್ಳಲಿದ್ದಾನೆ, ಮಧ್ಯಾಹ್ನದ ನಂತರ ದಿನನಿತ್ಯದಂತೆ ತುಸು ಮಳೆ ಸುರಿಯಬಹುದೆಂಬ ನಿರೀಕ್ಷೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಕೊಂಚ ಹೆಚ್ಚಿರಲಿದ್ದು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather Report May 28: Rain Will Continue Till May 31

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather Report May 28: Rain Will Continue Till May 31

ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ಉಷ್ಣಾಂಶ ಇದೆ ಎನ್ನುವ ಮಾಹಿತಿ ಇಲ್ಲಿದೆ: ವಿನ್ಯಾಸ-ಭರತ್ ಎಚ್‌.ಸಿ
English summary
Karnataka Weather Report May 28, Meteorological department predicted Rain Will Continue Till May 31 all over state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X