ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಜೋರು ಮಳೆ

|
Google Oneindia Kannada News

ಬೆಂಗಳೂರು, ಜೂನ್ 01: ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇತ್ತೀಚಿನ ಹವಾಮಾನ ಸೂಚನೆಗಳ ಪ್ರಕಾರ, ನೈಋತ್ಯ ಮಾನ್ಸೂನ್ ಮಾರುತಗಳು ಬಲಗೊಂಡಿವೆ. ಇದರ ಪರಿಣಾಮವಾಗಿ ಕೇರಳದಲ್ಲಿ ಮಳೆ ಚಟುವಟಿಕೆ ಹೆಚ್ಚಾಗುತ್ತದೆ. ಜೂನ್‌ 3ರ ವೇಳೆಗೆ ಕೇರಳ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.

ನೈಋತ್ಯ ಮಾನ್ಸೂನ್ ಮಾರುತಗಳು ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಸಾಮಾನ್ಯ ಮಳೆ ತರಲಿವೆ. ಮಧ್ಯ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.

Karnataka weather updates: Heavy Rainfall Occur Next 3 Days

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ನಿನ್ನೆಯೇ ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಲಿದೆ.

ಇದರ ಪರಿಣಾಮವಾಗಿ ಇಂದಿನಿಂದ ಜೂನ್ 4ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ.

Karnataka weather updates: Heavy Rainfall Occur Next 3 Days

ಬೆಂಗಳೂರಿನಲ್ಲಿ ಬಹುತೇಕ ಮೋಡಕವಿದ ವಾತಾವರಣವಿರಲಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka weather updates: Heavy Rainfall Occur Next 3 Days

ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಲ್ಲೆಲ್ಲಿ ಎಷ್ಟು ಉಷ್ಣಾಂಶವಿದೆ ಎಂಬುದರ ವಿವಿರ ಇಲ್ಲಿ ನೀಡಲಾಗಿದೆ( ವಿನ್ಯಾಸ ಭರತ್ ಎಚ್‌ಸಿ)

English summary
Meteorological department predicted that Heavy Rainfall Occur Next 3 Days,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X