ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಪರಿಸರ ಸ್ನೇಹಿ ಕುಡ್ಲ-ಕೊಚ್ಚಿ ಪೈಪ್‌ಲೈನ್

|
Google Oneindia Kannada News

''ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್'' ಅಡಿಯಲ್ಲಿ ಕರ್ನಾಟಕದ ಮಂಗಳೂರು - ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ.

ಕೊಚ್ಚಿ-ಮಂಗಳೂರು ಪೈಪ್‌ಲೈನ್ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ (ಪಿ.ಎನ್.ಜಿ.)ರೂಪದಲ್ಲಿ ಮನೆಗಳಿಗೆ ಪೂರೈಸಲಿದೆ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ.)ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ. ಎರಡೂ ರಾಜ್ಯಗಳಲ್ಲಿನ ಲಕ್ಷಾಂತರ ಜನರ ಜೀವನ ಸುಲಭಮಾಡಲಿದೆ . ಈ ಪೈಪ್‌ಲೈನ್ ಎರಡೂ ರಾಜ್ಯಗಳ ಬಡ, ಮಧ್ಯಮ ವರ್ಗ ಮತ್ತು ಉದ್ಯಮಿಗಳ ವೆಚ್ಚವನ್ನು ಕಡಿಮೆ ಮಾಡುತ್ತದೆ

ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್: ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್: ಮಂಗಳೂರು – ಕೊಚ್ಚಿ ನೈಸರ್ಗಿಕ ಅನಿಲ ಕೊಳವೆ ಮಾರ್ಗ

ಕೊಳವೆ ಮಾರ್ಗದ ಬಗ್ಗೆ: 450 ಕಿ.ಮೀ. ಉದ್ದದ ಈ ಕೊಳವೆ ಮಾರ್ಗವನ್ನು ಜಿ.ಎ.ಐ.ಎಲ್. (ಇಂಡಿಯಾ) ಲಿ., ನಿರ್ಮಿಸಿದೆ. ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಸ್ಸೂರ್, ಪಾಲಕ್ಕಾಡ್, ಮಲ್ಲಪುರಂ, ಕೋಳಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾದೂ ಕರ್ನಾಟಕದ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ.

ಈ ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು. ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು. ಈ ಕುರಿತ ಸಚಿತ್ರ ವಿವರ ಇಲ್ಲಿದೆ. (ಚಿತ್ರ ವಿನ್ಯಾಸ:ಭರತ್ ಎಚ್. ಸಿ)

Infographics:Kochi-Mangaluru natural gas pipeline
English summary
PM Narendra Modi inaugurates the Kochi-Mangaluru natural gas pipeline. Know more about it via infographics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X