ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographic; ವಿಧಾನ ಪರಿಷತ್‌ನಲ್ಲಿ ಪಕ್ಷಗಳ ಬಲಾಬಲ

|
Google Oneindia Kannada News

ಬೆಂಗಳೂರು, ಡಿಸೆಂಬರ್ 15; ಕರ್ನಾಟಕದ 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ 11 ಸ್ಥಾನಗಳಲ್ಲಿ ಜಯಗಳಿಸಿವೆ.

ವಿಧಾನ ಪರಿಷತ್ ಚುನಾವಣೆಯಲ್ಲಿ 11 ಸ್ಥಾನದಲ್ಲಿ ಜಯಗಳಿಸಿದರೂ ಬಿಜೆಪಿಗೆ ಮೇಲ್ಮನೆಯಲ್ಲಿ ಬಹುಮತವಿಲ್ಲ. 75 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಪಕ್ಷಕ್ಕೆ ಬಹುಮತ ಸಿಗಲು 38 ಸದಸ್ಯರು ಇರಬೇಕು.

ವಿಧಾನ ಪರಿಷತ್ ಚುನಾವಣೆ 2021; ಗೆದ್ದವರು, ಸೋತವರ ಪಟ್ಟಿ ವಿಧಾನ ಪರಿಷತ್ ಚುನಾವಣೆ 2021; ಗೆದ್ದವರು, ಸೋತವರ ಪಟ್ಟಿ

ಮಂಗಳವಾರ ಪ್ರಕಟವಾದ ಫಲಿತಾಂಶದ ಬಳಿಕ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಬಲ 37 ಆಗಿದೆ. ಬಹುಮತಕ್ಕೆ ಒಂದು ಸ್ಥಾನದ ಕೊರತೆ ಆಗಿದೆ. ಈ ಹಿಂದೆಯೂ ಪಕ್ಷಕ್ಕೆ ಬಹುಮತವಿರಲಿಲ್ಲ. ಆದ್ದರಿಂದ ಜೆಡಿಎಸ್ ಬೆಂಬಲ ಪಡೆದು, ಆ ಪಕ್ಷಕ್ಕೆ ಸಭಾಪತಿ ಸ್ಥಾನವನ್ನು ಬಿಜೆಪಿ ಬಿಟ್ಟುಕೊಟ್ಟಿತ್ತು.

ಜಾರಕಿಹೊಳಿ ಕುಟುಂಬದ ಮುಂದೆ ಮತ್ತೊಂದು ಸರ್ಕಾರಿ ಕಾರು! ಜಾರಕಿಹೊಳಿ ಕುಟುಂಬದ ಮುಂದೆ ಮತ್ತೊಂದು ಸರ್ಕಾರಿ ಕಾರು!

Legislative Council Eelections Result Partys Strength In Upper House

ಪಕ್ಷಗಳ ಬಲಾಬಲ; ಡಿಸೆಂಬರ್ 14ರಂದು ಪ್ರಕಟವಾದ ಫಲಿತಾಂಶದ ಬಳಿಕ ಬಿಜೆಪಿ ಸದಸ್ಯ ಬಲ 37, ಕಾಂಗ್ರೆಸ್ 26, ಜೆಡಿಎಸ್ 10, ಪಕ್ಷೇತರ 1 (ಲಖನ್ ಜಾರಕಿಹೊಳಿ).

ಸಚಿವ ಸ್ಥಾನ ಸಿಗದ ಸೇಡು ತೀರಿಸಿಕೊಂಡ ರಮೇಶ್ ಜಾರಕಿಹೊಳಿ!ಸಚಿವ ಸ್ಥಾನ ಸಿಗದ ಸೇಡು ತೀರಿಸಿಕೊಂಡ ರಮೇಶ್ ಜಾರಕಿಹೊಳಿ!

2015ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 14, ಜೆಡಿಎಸ್ 4, ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಎರಡು ಸ್ಥಾನದಲ್ಲಿ ಮಾತ್ರ ಜಯಗಳಿಸಿದೆ.

25 ವಿಧಾನ ಪರಿಷತ್ ಸ್ಥಾನಗಳ ಪೈಕಿ 6 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆ ಮಾಡಿತ್ತು. ಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತದೆ. ಆದ್ದರಿಂದ ವಿಧೇಯಕಗಳ ಅಂಗೀಕಾರದ ಸಂದರ್ಭದಲ್ಲಿ ಬಹುಮತ ಇಲ್ಲದಿದ್ದರೂ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ.

English summary
The ruling Bharatiya Janata Party fell short of one member for a majority in the 75-member upper house in Karnataka legislative council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X