ಬೆಂಗಳೂರು: ಸರ್ಕಾರಿ ಉಚಿತ ಕೋವಿಡ್ ಲಸಿಕಾ ಕೇಂದ್ರಗಳ ಕುರಿತು ಮಾಹಿತಿ
ಬೆಂಗಳೂರು, ಏಪ್ರಿಲ್ 03: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ರಾಜ್ಯದ ಅರ್ಧಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದೆ.
ಇನ್ನು ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿರುವ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡುವಂತೆ ತಿಳಿಸಿದ್ದು, ಅಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಒಟ್ಟು 525 ಲಸಿಕೆ ಕೇಂದ್ರಗಳಿದ್ದು, ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು ಹಾಗೂ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಂಚಿಕೆ ಮಾಡಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ದಿನಕ್ಕೆ 85 ಸಾವಿರ ಲಸಿಕೆ ನೀಡಬಹುದಾದ ವ್ಯವಸ್ಥೆ ಇದ್ದು, ಸದ್ಯ ಪಾಲಿಕೆ ಬಳಿ 1.50 ಲಕ್ಷ ಡೋಸ್ ಲಸಿಕೆ ಸಂಗ್ರಹವಿದೆ. ಹೆಚ್ಚುವರಿ 4 ಲಕ್ಷ ಡೋಸ್ ಲಸಿಕೆ ಬರಬೇಕಿದೆ.

ಇಲ್ಲಿಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 7 ಲಕ್ಷ ವ್ಯಾಕ್ಸಿನೇಷನ್ ಆಗಿದೆ. ನಗರದಲ್ಲಿ 60 ವರ್ಷ ಮೇಲ್ಪಟ್ಟವರು 10 ಲಕ್ಷ ಮಂದಿ ಮತ್ತು 25 ಲಕ್ಷ ಮಂದಿ 45 ಮೇಲ್ಪಟ್ಟವರಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭವಾಗಿದ್ದು, ಕೊರೊನಾ ಕೇಸ್ ಹತೋಟಿಗೆ ತರಲು ಪ್ರಯತ್ನಿಸಲಾಗುವುದು .

ಈಗಾಗಲೇ ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದ್ದು, ಎಲ್ಲೆಲ್ಲಿ ಉಚಿತ ಲಸಿಕೆ ಸಿಗಲಿದೆ, ಕೇಂದ್ರದ ವಿಳಾಸವನ್ನು ಕೂಡ ನಾವು ನೀಡಿದ್ದೇವೆ. ವಿನ್ಯಾಸ: ಭರತ್ ಎಚ್.ಸಿ







Recommended Video













Click it and Unblock the Notifications