ಲೋಕಸಭೆ ಚುನಾವಣೆ- 2 ನೇ ಹಂತದ ಮತದಾನ: ಚಿತ್ರವಿವರ

ನವದೆಹಲಿ, ಏಪ್ರಿಲ್ 17: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಏಪ್ರಿಲ್ 18 ರಂದು ನಡೆಯಲಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಯಾವೆಲ್ಲ ರಾಜ್ಯಗಳಲ್ಲಿ, ಎಷ್ಟು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ ಒಟ್ಟು 12 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ತ್ರಿಪುರ ರಾಜ್ಯದ ಏಕೈಕ ಕ್ಷೇತ್ರಕ್ಕೆ ಏಪ್ರಿಲ್ 18 ರಂದು ನಡೆಯಬೇಕಿದ್ದ ಚುನಾವಣೆಯನ್ನು ಚುನಾವಣಾ ಆಯೋಗ ಮುಂದೂಡಿರುವ ಕಾರಣ ಆ ರಾಜ್ಯದಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿದೆ.

ಉಳಿದಂತೆ 12 ರಾಜ್ಯಗಳ ಒಟ್ಟು 95 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಹಾರಾಷ್ಟ್ರ, ಮಣಿಪುರ, ಒಡಿಶಾ, ಪಾಂಡಿಚೇರಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮತದಾರರು ಮತದಾನ ಮಾಡುವ ಮೂಲಕ ತಮ್ಮ ಅಮೂಲ್ಯ ಹಕ್ಕನ್ನು ಚಲಾಯಿಸಲಿದ್ದಾರೆ. ಈ ಮೇಲಿನ ಎಲ್ಲಾ ರಾಜ್ಯಗಳಲ್ಲೂ ಒಂದಕ್ಕಿಂತ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಚುನಾವಣೆಯ ಬಗ್ಗೆ ಚಿತ್ರ ಮಾಹಿತಿ ಇಲ್ಲಿದೆ.

LS polls: 2nd phase of voting in 12 states, 95 constituencies: details in Infographic
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+