Infographics: ಕರ್ನಾಟಕದ ಮೂರು ಭಾಗದ ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

ಬೆಂಗಳೂರು, ಜುಲೈ 27: ಕರ್ನಾಟಕದ ಎಲ್ಲ ಭಾಗದಲ್ಲೂ ದುರ್ಬಲವಾಗಿದ್ದು, ಮುಂಗಾರು ಒಂದೆರಡು ಕಡೆ ಉತ್ತಮವಾಗಿ ಸುರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ರಾಜ್ಯ ಒಳನಾಡಿನ ಭಾಗದಲ್ಲಿ ಹಲವು ಕಡೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಎಲ್ಲ ಭಾಗಗಳಲ್ಲೂ ಮಳೆ ದುರ್ಬಲವಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಲ್ಲಿ ಸಾಧಾರಣ ಇಲ್ಲವೇ ಉತ್ತಮ ಮಳೆ ಬೀಳುವ ಸಾಧ್ಯತೆ ಇದೆ. ಇದರ ಹೊರತು ಹವಾಮಾನದಲ್ಲಿ ಯಾವುದ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಅಷ್ಟಾಗಿ ಇಲ್ಲದ ಪರಿಣಾಮ ರಾಜ್ಯದ ಹಲವು ಕಡೆಗಳಲ್ಲಿ ಸಾಮಾನ್ಯ ಮಳೆ ದಾಖಲಾಗಿದೆ. ಎಲ್ಲಿಯೂ ಜೋರು ಇಲ್ಲವೇ ಗುಡುಗು ಸಹಿತ ಅಬ್ಬರ ಮಳೆ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಹಲವು ಪ್ರದೇಶಗಳಲ್ಲಿ ಮಳೆ ಆಗಿದೆ. ಇದರ ಹೊರತು ಧಾರಾಕಾರ ಮಳೆ ಮನ್ಸೂಚನೆ ಇಲ್ಲ ಎಂದು ಎಂದು ರಾಜ್ಯಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ.

ದೇಶದ ವಿವಿಧೆಡೆ ಮಳೆ ಅಬ್ಬರ ಹೇಗಿದೆ

ದೇಶದ ವಿವಿಧೆಡೆ ಮಳೆ ಅಬ್ಬರ ಹೇಗಿದೆ

ಕೆಲವು ದಿನಗಳಿಂದ ಕರ್ನಾಟಕ ಸೇರಿದಂತೆ ಕೆಲವೇ ಕೆಲವು ರಾಜ್ಯಗಳಲ್ಲಿ ಮುಂಗಾರು ದುರ್ಬಲಗೊಂಡಿದೆ. ಆದರೆ ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರದ ಒಂದೆರಡು ಕಡೆಗಳಲ್ಲಿ, ತೆಲಂಗಾಣ, ಗೋವಾ, ಚತ್ತೀಸ್‌ಗರ್ ಹಾಗೂ ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಧಾರಕಾರವಾಗಿ ಮಳೆ ದಾಖಲಾಗಿದೆ. ಕರ್ನಾಟಕ ಸೇರಿದಂತೆ ಉಳಿದ ಕಡೆಗಳಲ್ಲಿ ಮಳೆ ಸಾಮಾನ್ಯವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

 ಸಿಲಿಕಾನ್ ಸಿಟಿಗೆ ಏನಿದೆ ಮುನ್ಸೂಚನೆ

ಸಿಲಿಕಾನ್ ಸಿಟಿಗೆ ಏನಿದೆ ಮುನ್ಸೂಚನೆ

ಬೆಂಗಳೂರಿನಲ್ಲಿ ಕೂಡ ಮುಂಗಾರು ಮಳೆ ದುರ್ಬಲಗೊಂಡಿದೆ. ಮುಂದಿನ 48 ಗಂಟೆಯಲ್ಲಿ ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಬಹಳಷ್ಟಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ 2ದಿನ ಹಗುರ ಮಳೆ

ಮುಂದಿನ 2ದಿನ ಹಗುರ ಮಳೆ

ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ (ಮಲೆನಾಡು) ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ತುಮಕೂರು, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳ ಮುಂದಿನ ಎರಡು ದಿನ ಹಗುರ ಮಳೆ ನಿರೀಕ್ಷೆ ಇದೆ. ಇನ್ನು ಉತ್ತರ ಒಳನಾಡಿನ ಯಾದರಿಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಆಯಾ ಪ್ರದೇಶಗಳಲ್ಲಿ ಮೋಡ ಮುಸಕಿನ ವಾತಾವರಣ ಕಂಡು ಬರಲಿದೆ. ಕರಾವಳಿಯಲ್ಲಿ ಗಾಳಿಯ ವೇಗ ಸಾಮಾನ್ಯ ಸ್ಥಿತಿಯಲ್ಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಕರ್ನಾಟಕದಲ್ಲಿ ಎಲ್ಲೆಲ್ಲಿ ಎಷ್ಟು ತಾಪಮಾನ ದಾಖಲಾಗಿದೆ

ಕರ್ನಾಟಕದಲ್ಲಿ ಎಲ್ಲೆಲ್ಲಿ ಎಷ್ಟು ತಾಪಮಾನ ದಾಖಲಾಗಿದೆ

ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ತೇವಾಂಶ 77ರಷ್ಟು ದಾಖಲಾಗಿದೆ. ಇನ್ನು ಗಾಳಿಯ ವೇಗ ಗಂಟೆಗೆ 26 ಕಿ.ಮೀ ಇದೆ. ಬಾಗಲಕೋಟೆಯಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 73ರಷ್ಟು ತೇವಾಂಶ ದಾಖಲಾಗಿದೆ.

ಮಂಗಳೂರಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 83ರಷ್ಟು ತೇವಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 73ರಷ್ಟು ತೇವಾಂಶ ಇದೆ. ಮೈಸೂರಿನಲ್ಲಿ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ತೇವಾಂಶ 53 ಕಂಡು ಬಂದಿದೆ. ಬಳ್ಳಾರಿಯಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ ದಾಖಲಾಗಿದೆ.

ಇನ್ನು ರಾಯಚೂರಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 67ರಷ್ಟು ತೇವಾಂಶ, ಚಿತ್ರದುರ್ಗ 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 73ರಷ್ಟು ತೇವಾಂಶ, ಕಲಬುರಗಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 67ರಷ್ಟು ತೇವಾಂಶ ಇದೆ, ಚಿಕ್ಕಮಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 70ರಷ್ಟು ತೇವಾಂಶ ಕಂಡು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+