Infographics; ಭಾರತದಲ್ಲಿ ಎಲ್ಲಿ, ಎಷ್ಟು ಓಮಿಕ್ರಾನ್ ಪ್ರಕರಣಗಳು?

ನವದೆಹಲಿ, ಡಿಸೆಂಬರ್ 21; ಭಾರತದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ.

ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಭಾರತದಲ್ಲಿ 24 ಗಂಟೆಯಲ್ಲಿ 5,326 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 581 ದಿನಗಳಲ್ಲಿಯೇ ಅತ್ಯಂತ ಕಡಿಮೆ ಹೊಸ ಪ್ರಕರಣ ಪತ್ತೆಯಾಗಿದೆ.

ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಿದೆ. ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ತಲಾ 54, 54 ಓಮಿಕ್ರಾನ್ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 28, ದೆಹಲಿಯಲ್ಲಿ 12 ಜನರು ಗುಣಮುಖಗೊಂಡಿದ್ದಾರೆ.

Omicron Cases In India Crossed 200 Mark

ನಂತರದ ಸ್ಥಾನಗಳಲ್ಲಿ ತೆಲಂಗಾಣ (20), ಕರ್ನಾಟಕ (19), ರಾಜಸ್ಥಾನ (18), ಕೇರಳ (15), ಗುಜರಾತ್ (14) ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶ (2), ಆಂಧ್ರ ಪ್ರದೇಶ (1), ಚಂಡೀಗಢ್ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಡಿಸೆಂಬರ್ 2ರಂದು ಭಾರತದ ಮೊದಲ ಓಮಿಕ್ರಾನ್ ಪ್ರಕರಣ ಕರ್ನಾಟಕದ ಬೆಂಗಳೂರಿನಲ್ಲಿ ದಾಖಲಾಗಿತ್ತು. ಡಿಸೆಂಬರ್ 21ರಂದು ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿದೆ.

ವಿಶ್ವದ ವಿವಿಧ ದೇಶಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಡೆಲ್ಟಾಗಿಂತಲೂ ವೇಗವಾಗಿ ಓಮಿಕ್ರಾನ್ ಪ್ರಸರಣವಾಗುತ್ತಿದೆ ಎಂದು ಈಗಾಗಲೇ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+