Infographics; ಭಾರತದ ಓಮಿಕ್ರಾನ್ ಪಕರಣಗಳು 271ಕ್ಕೆ ಏರಿಕೆ
ಚೆನ್ನೈ, ಡಿಸೆಂಬರ್ 23; ತಮಿಳುನಾಡಿನಲ್ಲಿ 33 ಹೊಸ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.
ಗುರುವಾರ ತಮಿಳುನಾಡಿನಲ್ಲಿ 33 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 34 ಆಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬೆಳಗ್ಗೆ 9.30ರ ಸುಮಾರಿಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿತ್ತು. ದೇಶದಲ್ಲಿನ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 236, 104 ಜನರು ಗುಣಮುಖರಾಗಿದ್ದಾರೆ ಎಂದು ಹೇಳಿತ್ತು.

ಭಾರತದಲ್ಲಿ ಅತಿ ಹೆಚ್ಚು ಓಮಿಕ್ರಾನ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ (65), ದೆಹಲಿ (64), ಮೂರನೇ ಸ್ಥಾನದಲ್ಲಿ ತಮಿಳುನಾಡು (34), ತೆಲಂಗಾಣ (24).
ಉತ್ತರಾಖಂಡ ರಾಜ್ಯದಲ್ಲಿ ಬುಧವಾರ ಕೋವಿಡ್ ರೂಪಾಂತರಿ ಓಮಿಕ್ರಾನ್‌ನ ಮೊದಲ ಪ್ರಕರಣ ದಾಖಲಾಗಿತ್ತು. ಸ್ಕಾಟ್‌ಲ್ಯಾಂಡ್‌ನಿಂದ ವಾಪಸ್ ಆಗಿದ್ದ 23 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಉತ್ತರಾಖಂಡ ರಾಜ್ಯಕ್ಕೆ ವಿದೇಶದಿಂದ ವಾಪಸ್ ಆದ ಇಬ್ಬರಿಗೆ ಸಹ ಕೋವಿಡ್ ಸೋಂಕು ತಗುಲಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು.












Click it and Unblock the Notifications