Infographics: ಏ.16ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಳಿತ

ಬೆಂಗಳೂರು, ಏಪ್ರಿಲ್ 4: ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಒಂದು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಕಳೆದ 25 ದಿನಗಳಲ್ಲಿ 15 ದಿನ ಇಂಧನ ಪರಿಷ್ಕರಣೆಯಾಗಿದೆ. ಕಳೆದ ಒಂದು ವಾರದಿಂದ ದೇಶದ ಸರ್ಕಾರಿ ತೈಲ ಕಂಪನಿಗಳು ಇಂದನ ಪರಿಷ್ಕರಣೆ ಮಾಡಿಲ್ಲ. ನಿನ್ನೆಯೂ (ಶುಕ್ರವಾರ) ಇಂಧನ ದರ ಸ್ಥಿರವಾಗಿತ್ತು. ಇದೀಗ ಶನಿವಾರವಾದ ಇಂದು(ಏಪ್ರಿಲ್ 4) ಸಹ ಪೆಟ್ರೋಲ್​, ಡೀಸೆಲ್​ ಬೆಲೆ ದೇಶದ ಪ್ರಮುಖ ನಗರಗಳಲ್ಲಿ ಸ್ಥಿರತೆ ಇದ್ದರೂ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೈಸೆಗಳಲ್ಲಿ ಏರಿಳಿತ ಕಂಡಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಹತ್ತು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.

Petrol And Diesel Prices Changed on 16th April 2022 In Karnataka: Check Rate in Your City


ರಾಜ್ಯದ ಕೆಲವು ನಗರಗಳಲ್ಲಿ ಏರಿಳಿತ ಕಂಡು ಬಂದಿದ್ದು, ಇಂದು ಚಿತ್ರದುರ್ಗದಲ್ಲಿ ಪೆಟ್ರೋಲ್‌ ಬೆಲೆ 112.16 ರೂಪಾಯಿ ಆಗಿದೆ. ನಿನ್ನೆ ಚಿತ್ರದುರ್ಗದಲ್ಲಿ ಪೆಟ್ರೋಲ್‌ ಬೆಲೆ 112.51 ರೂ. ಆಗಿತ್ತು. ಇನ್ನು ದಾವಣಗೆರೆಯಲ್ಲಿ ಪೆಟ್ರೋಲ್‌ ದರ 112.61 ಆಗಿದೆ. ನಿನ್ನೆ ದಾವಣಗೆರೆಯಲ್ಲಿ ಪೆಟ್ರೋಲ್‌ ದರ 113.15 ರೂ. ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಿಂದ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಪೆಟ್ರೋಲ್‌ ಬೆಲೆಯು 111.09 ರೂಪಾಯಿ ಆಗಿದೆ. ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಪೆಟ್ರೋಲ್‌ ಬೆಲೆ ಅತ್ಯಧಿಕ ಇದೆ. ಚಿಕ್ಕಮಗಳೂರಿನಲ್ಲಿ 112.78 ರೂ. ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದರೆ, ಬಳ್ಳಾರಿಯಲ್ಲಿ 113.03 ಇದ್ದು, ಉಳಿದಂತೆ ಇತರೆ ಜಿಲ್ಲೆಗಳಲ್ಲಿ 111 ರಿಂದ 113 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol And Diesel Prices Changed on 16th April 2022 In Karnataka: Check Rate in Your City


ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ. ಆಗಿತ್ತು. ಆದರೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 94.79 ರೂ. ಆಗಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ 96 ರೂ.ಗಿಂತ ಹೆಚ್ಚಿದೆ. ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 96.52 ರೂ. ಪ್ರತಿ ಲೀಟರ್‌ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪ್ರತಿ ಲೀಟರ್‌ ಡೀಸೆಲ್ ಬೆಲೆ 95.94 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 94 ರಿಂದ 96 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

Petrol And Diesel Prices Changed on 16th April 2022 In Karnataka: Check Rate in Your City

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್​ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 111.7 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

Recommended Video

      ಹುಲಿಯ ಹಳೇ ವಿಡಿಯೋ ಈಗ ಸದ್ದು ಮಾಡ್ತಿದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+