ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಏ.1ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಳಿತ

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಪ್ರತಿ ದಿನ ಪರಿಷ್ಕರಣೆ ವೇಳೆ ಏರಿಕೆ ಮಾಡುತ್ತಿದೆ. ದೇಶದಲ್ಲಿ 10 ದಿನಗಳಲ್ಲಿ 9 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಆದರೆ, ಇಂದು(ಏಪ್ರಿಲ್ 1) ಪೆಟ್ರೋಲ್‌, ಡೀಸೆಲ್ ದರ ಪರಿಷ್ಕರಿಸಿಲ್ಲ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರಿ ಏರಿಕೆ ಕಂಡಿದೆ. ಪ್ರಮುಖವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ಅಂದರೆ 137 ದಿನಗಳ ಬಳಿಕ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು.

ಏ.1ರಂದು ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೇಗಿದೆ?ಏ.1ರಂದು ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೇಗಿದೆ?

ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಮಾ‌ರ್ಚ್ 31ರಂದು ಪೆಟ್ರೋಲ್, ಡೀಸೆಲ್‌ಗೆ ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿತ್ತು. ಏಪ್ರಿಲ್ 1ರಂದು ಪ್ರಮುಖ ಮೆಟ್ರೋನಗರಗಳಲ್ಲಿ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ.

Petrol And Diesel Prices Changed on 1st April 2022 In Karnataka: Check Rate in Your City


ರಾಜ್ಯದ ಕೆಲವು ನಗರಗಳಲ್ಲಿ ಏರಿಳಿತ ಕಂಡು ಬಂದಿದೆ. ಇಂದು ಚಿಕ್ಕಮಗಳೂರಿನಲ್ಲಿ ಪೆಟ್ರೋಲ್‌ ಬೆಲೆ 109.63 ರೂಪಾಯಿ ಆಗಿದೆ. ನಿನ್ನೆ ಚಿಕ್ಕಮಗಳೂರಿನಲ್ಲಿ ಪೆಟ್ರೋಲ್‌ ಬೆಲೆ 108.99 ರೂ. ಆಗಿತ್ತು. ಇನ್ನು ಉತ್ತರ ಕನ್ನಡದಲ್ಲಿ ಪೆಟ್ರೋಲ್‌ ದರ 109.15 ಆಗಿದೆ. ನಿನ್ನೆ ಉತ್ತರ ಕನ್ನಡದಲ್ಲಿ ಪೆಟ್ರೋಲ್‌ ದರ 109.51 ರೂ. ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಪೆಟ್ರೋಲ್‌ ಬೆಲೆಯು 103.93 ರೂಪಾಯಿ ಆಗಿದೆ. ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ಚಿಕ್ಕಮಗಳೂರಿನಲ್ಲಿ 109.63 ರೂ. ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 107 ರಿಂದ 109 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol And Diesel Prices Changed on 1st April 2022 In Karnataka: Check Rate in Your City


ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ. ಆಗಿತ್ತು. ಆದರೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 91.27 ರೂ. ಆಗಿದೆ. ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿ 92 ರೂ.ಗಿಂತ ಹೆಚ್ಚಿದೆ. ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 92.94 ರೂ. ಪ್ರತಿ ಲೀಟರ್‌ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪ್ರತಿ ಲೀಟರ್‌ ಡೀಸೆಲ್ ಬೆಲೆ 92.42 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 91 ರಿಂದ 92 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

Petrol And Diesel Prices Changed on 1st April 2022 In Karnataka: Check Rate in Your City

Recommended Video

ಮತ್ತೆ JDS ಸೇರಲು ಕಾಂಗ್ರೆಸ್ ಬಿಡೋ ನಿರ್ಧಾರ ಮಾಡಿದ್ರಾ ಜಮೀರ್ ಅಹಮದ್?? | Oneindia Kannada

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್​ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 104.8 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

English summary
Domestic Petrol and Diesel Price changed on Saturday (April 1) in Many cities of across Karnataka. Latest Rates Here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X