Infographics: ಅ.5ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಏರಿಕೆ?

ಬೆಂಗಳೂರು, ಅಕ್ಟೋಬರ್ 5: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ 12 ದಿನಗಳಲ್ಲಿ 9 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಇಂದು (ಅ.5, ಮಂಗಳವಾರ) ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ 25 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಮೇಲೆ 30 ಪೈಸೆ ಹೆಚ್ಚಳವಾಗಿದೆ.

ಕಳೆದ ಭಾನುವಾರದಂದು ಪ್ರತಿ ಲೀಟರ್ ಮೇಲೆ ಸರಾಸರಿ 20 ರಿಂದ 30 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು. ಕಳೆದ 9 ದಿನಗಳಲ್ಲಿ ಪೆಟ್ರೋಲ್ 1.25 ರುಪಾಯಿ, ಡೀಸೆಲ್ 2.30 ರುಪಾಯಿಯಷ್ಟು ಬೆಲೆ ಹೆಚ್ಚಳ ಕಂಡಿದೆ. ಸೆ.5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ನಂತರ ಇಂಧನ ಬೆಲೆ ಏರಿಕೆಯಾಗುತ್ತಿದೆ.

 ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ

ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ

ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲ್ ಬೆಲೆ ಮಾತ್ರ ಏರಿಕೆಯಾಗಿದೆ.

ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಕಳೆದ 10 ದಿನಗಳಿಂದ ಚೇತರಿಸಿಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.

 ದೆಹಲಿಯಲ್ಲಿ ಪ್ರತಿ ಲೀಟರ್‌ಗೆ 102.64 ರೂ

ದೆಹಲಿಯಲ್ಲಿ ಪ್ರತಿ ಲೀಟರ್‌ಗೆ 102.64 ರೂ

ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 44 ಬಾರಿ ಹಾಗೂ ಡೀಸೆಲ್ 41 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 102.64 ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 91.07ರು ಆಗಿದೆ. ಅದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳ ದರ ಪಟ್ಟಿ ವಿವರ ಮುಂದಿದೆ...

 ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಹೇಗಿದೆ?

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಹೇಗಿದೆ?

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 106.21 ರೂ. ಇದೆ, ಬಳ್ಳಾರಿಯಲ್ಲಿ 108.11, ದಾವಣಗೆರೆಯಲ್ಲಿ 107.98 ರೂ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ 106 ರೂ.ನಿಂದ 107 ರೂ. ಇದೆ.

 ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳಿವು

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳಿವು

ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 96.66 ರೂ. ಇದೆ. ಕಲಬುರಗಿಯಲ್ಲಿ 96.42 ರೂ. ಚಾಮರಾಜನಗರದಲ್ಲಿ 97.38 ರೂ., ಬೀದರ್‌ನಲ್ಲಿ 97.16 ರೂ., ಹಾಸನದಲ್ಲಿ 96.53 ರೂ. ಕೋಲಾರದಲ್ಲಿ 96.71 ರೂ., ಉಡುಪಿಯಲ್ಲಿ 96.13 ರೂ. ಮೈಸೂರಿನಲ್ಲಿ 96.46 ರೂ., ಧಾರವಾಡ 96.44 ರೂ., ಬಿಜಾಪುರದಲ್ಲಿ 96.61 ರೂ. ಇದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಇಂಧನ ದರ ಪರಿಷ್ಕರಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 1) ಸಚಿತ್ರ ಮಾಹಿತಿ ಇಲ್ಲಿದೆ.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+