Infographics: ಏಪ್ರಿಲ್ 14ರಂದು ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು?

ಬೆಂಗಳೂರು, ಏಪ್ರಿಲ್ 14: ಭಾರತದಲ್ಲಿ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಬುಧವಾರ(ಏ.14) ಸ್ಥಿರತೆ ಕಂಡು ಬಂದಿದೆ. ಕಳೆದ 18 ದಿನಗಳಲ್ಲಿ 14 ಬಾರಿ ಏರಿಕೆ ಕಂಡಿದ್ದ ಇಂಧನ ದರ ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲೂ ಸ್ಥಿರವಾಗಿದೆ. ಈಗಾಗಲೇ ದೇಶದಲ್ಲಿ 18 ದಿನದಲ್ಲಿ ಪೆಟ್ರೋಲ್-ಡೀಸೆಲ್ ದರ 10 ರೂಪಾಯಿ ಏರಿಕೆಯಾಗಿದೆ. ಕರ್ನಾಟಕದಲ್ಲಿಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಅತ್ಯಧಿಕ ಬೆಲೆ ಹೊಂದಿವೆ.

ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಏಪ್ರಿಲ್‌ 14ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್‌ಗೆ ರೂ. 105.41 ಆಗಿದೆ. ದೆಹಲಿಯಲ್ಲಿ ಮೂರು ದಿನಗಳಿಂದಲೂ ಪೆಟ್ರೋಲ್‌ ದರ ಸ್ಥಿರವಾಗಿದೆ. ಡಿಸೇಲ್ ಬೆಲೆಯು ಕೂಡಾ ಸ್ಥಿರವಾಗಿದ್ದು ರೂ.96.67 ಆಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡು ಬಂದಿದೆ. ಪೆಟ್ರೋಲ್‌, ಡೀಸೆಲ್ ದರ ಕಳೆದ 18 ದಿನಗಳಲ್ಲಿ ನಾಲ್ಕು ದಿನ ಮಾತ್ರ ಸ್ಥಿರವಾಗಿದ್ದು, ಉಳಿದ ದಿನಗಳಲ್ಲಿ ಏರಿಕೆ ಕಂಡಿದೆ. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ 111.09 ರೂಪಾಯಿ

ಬೆಂಗಳೂರಿನಲ್ಲಿ ಪೆಟ್ರೋಲ್ ದರ 111.09 ರೂಪಾಯಿ

ಬೆಂಗಳೂರಿನಲ್ಲಿ ಪೆಟ್ರೋಲ್ ದರ 111.09 ರೂಪಾಯಿಗೆ ಆಗಿದೆ. ಇನ್ನು ಡೀಸೆಲ್ ಬೆಲೆಯು 94.79 ರೂಪಾಯಿ ಆಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ದರ 113.30 ರೂಪಾಯಿ ಆಗಿರುವುದೇ ಕರ್ನಾಟಕದಲ್ಲಿ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೊಪ್ಪಳ, ಶಿವಮೊಗ್ಗ, ಜಿಲ್ಲೆಗಳಲ್ಲೂ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರು ಪ್ಲಸ್ ನಂತಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 110 ರಿಂದ 112 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 94.79 ರೂ

ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 94.79 ರೂ

ಬೆಂಗಳೂರಿನಲ್ಲಿ ಕಳೆದ 17 ದಿನಗಳಿಂದಲೂ ಡೀಸೆಲ್ ದರದಲ್ಲಿ ಏರಿಕೆ ಕಂಡು ಬರುತ್ತಿದ್ದು, ಸೋಮವಾರ ಸ್ಥಿರವಾಗಿದೆ. ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 94,79 ರೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 96.69 ರೂ. ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಳ್ಳಾರಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ 96 ರು ಗೂ ಅಧಿಕ ಬೆಲೆ ಇದೆ. ಉಳಿದ ಜಿಲ್ಲೆಗಳಲ್ಲಿ ಡೀಸೆಲ್ ದರವು 94 ರೂಪಾಯಿಯಿಂದ 76 ರೂಪಾಯಿವರೆಗೂ ದರವಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ

ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ದೇಶದಲ್ಲಿ ಕಳೆದ 15 ದಿನಗಳಿಂದಲೂ ಪೆಟ್ರೋಲ್​- ಡೀಸೆಲ್​ ದರದಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ, ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 105.5 ಡಾಲರ್‌ಗೆ ಏರಿಕೆಯಾಗಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 1110.2 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+