Infographics: ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ 16 ದಿನದಲ್ಲಿ 10 ರೂಪಾಯಿ ಏರಿಕೆ

ಬೆಂಗಳೂರು, ಏಪ್ರಿಲ್ 6: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯು ನಿರಂತರವಾಗಿ ಮುಂದುವರಿದಿದೆ. ಕಳೆದ 16 ದಿನಗಳಲ್ಲಿ ಇಂಧನ ದರದಲ್ಲಿ ಬರೋಬ್ಬರಿ 10 ರೂಪಾಯಿ ಏರಿಕೆ ಆಗಿರುವುದು ಕಂಡು ಬಂದಿದೆ. ಬುಧವಾರ (ಏಪ್ರಿಲ್‌ 6, 2022) ಕೂಡ ಪೆಟ್ರೋಲ್, ಡೀಸೆಲ್ ಹೆಚ್ಚಳವಾಗಿದೆ.

ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಏಪ್ರಿಲ್‌ 6ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಪೆಟ್ರೋಲ್ ಬೆಲೆ 91 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ ರೂ. 111.16 ಆಗಿದೆ. ಇನ್ನು ಡಿಸೇಲ್ ಬೆಲೆಯು ಕೂಡಾ ಲೀಟರ್‌ಗೆ 85 ಪೈಸೆ ಹೆಚ್ಚಳವಾಗಿ, 94.86ಕ್ಕೆ ತಲುಪಿದೆ.

ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಹಿನ್ನೆಲೆ ಮುಂದಿನ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಆಗುತ್ತಿದೆ. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ.

Petrol And Diesel Price In Karnataka On April 6th: Check Rate in Your City

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಪೆಟ್ರೋಲ್ ದರ 91 ಪೈಸೆ ಏರಿಕೆಯಾಗಿದ್ದು, 111.16 ರೂಪಾಯಿಗೆ ಏರಿಕೆ ಆಗಿದೆ. ಇನ್ನು ಡೀಸೆಲ್ ಬೆಲೆಯು ಕೂಡಾ ಏರಿಕೆಯಾಗಿದೆ. ಡಿಸೇಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದ್ದು, 94.86 ರೂ ಆಗಿದೆ. ದಾವಣಗೆರೆಯಲ್ಲಿ ಪೆಟ್ರೋಲ್ ದರ 113.15 ರೂಪಾಯಿ ಆಗಿರುವುದೇ ಕರ್ನಾಟಕದಲ್ಲಿ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಇನ್ನು ನಿನ್ನೆ ಇದೇ ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ದರ 112.05 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 109 ರಿಂದ 111 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

Petrol And Diesel Price In Karnataka On April 6th: Check Rate in Your City

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್ ದರ?

ಬೆಂಗಳೂರಿನಲ್ಲಿ ಕಳೆದ 16 ದಿನಗಳಿಂದಲೂ ಡೀಸೆಲ್ ದರದಲ್ಲಿ ಏರಿಕೆ ಕಂಡು ಬರುತ್ತಿದೆ. ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 94.861 ರೂ ಇದೆ. ದಾವಣಗೆರೆ ಜಿಲ್ಲೆಯಲ್ಲಿ 96.52 ರೂ. ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ಇದೇ ದಾವಣಗೆರೆ ಜಿಲ್ಲೆಯಲ್ಲಿ ಡೀಸೆಲ್ ಬೆಲೆಯು 95.50 ರೂಪಾಯಿಯಾಗಿದ್ದು, ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ, ಧಾರವಾಡ ಹಾಸನ ಜಿಲ್ಲೆಗಳಲ್ಲಿ ಡೀಸೆಲ್ ದರವು 94 ರೂಪಾಯಿಗೆ ಹತ್ತಿರದಲ್ಲಿದ್ದರೆ, ಉಳಿದೆಲ್ಲ ಜಿಲ್ಲೆಗಳಲ್ಲಿ 94 ರೂಪಾಯಿಗಿಂತ ಹೆಚ್ಚಾಗಿದೆ.

Petrol And Diesel Price In Karnataka On April 6th: Check Rate in Your City

ಬೆಳಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ:

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ:

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ದೇಶದಲ್ಲಿ ಕಳೆದ 15 ದಿನಗಳಿಂದಲೂ ಪೆಟ್ರೋಲ್​- ಡೀಸೆಲ್​ ದರದಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ, ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 103.60 ಡಾಲರ್ ಏರಿಕೆಯಾಗಿದ್ದು, ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 107.90 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+