Infographics: ಮೇ 25ರಂದು ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಪೆಟ್ರೋಲ್-ಡೀಸೆಲ್ ದರ?

ಬೆಂಗಳೂರು, ಮೇ 25: ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಮೇ 25ರಂದು ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ.

ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ. ಮೇ 22ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್‌ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ. ಇಂದು ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್‌ ಬೆಲೆ ಗರಿಷ್ಠ 104.09 ರೂಪಾಯಿ ಆಗಿದೆ. ಅದೇ ದಾವಣಗೆರೆ ಜಿಲ್ಲೆಯಲ್ಲಿ ಡೀಸೆಲ್ ದರ ಗರಿಷ್ಠ 89.70 ರೂ. ಇದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ 24 ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.94 ರೂಪಾಯಿಗೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬಳ್ಳಾರಿ, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103 ರೂಪಾಯಿ ಗಡಿ ದಾಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ದರ 104.09 ರೂಪಾಯಿ ಆಗಿರುವುದೇ ಕರ್ನಾಟಕದಲ್ಲಿ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಇನ್ನು ನಿನ್ನೆ ಇದೇ ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ದರ 103.90 ರೂಪಾಯಿ ಆಗಿದ್ದು, ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 101 ರಿಂದ 102 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಡೀಸೆಲ್ ದರ ಎಷ್ಟಿದೆ?

ರಾಜ್ಯದ ಪ್ರಮುಖ ನಗರಗಳಲ್ಲಿ ಡೀಸೆಲ್ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ 87.89 ರೂಪಾಯಿ ಇದೆ. ದಾವಣಗೆರೆ ಜಿಲ್ಲೆಯಲ್ಲಿ 89.70 ರೂಪಾಯಿಗೆ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ಇದೇ ದಾವಣಗೆರೆ ಜಿಲ್ಲೆಯಲ್ಲಿ ಡೀಸೆಲ್ ಬೆಲೆಯು 89.53 ರೂಪಾಯಿಯಾಗಿದ್ದು, ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಇದರ ಹೊರತಾಗಿ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯಲ್ಲಿ 89 ರೂಪಾಯಿಗಿಂತ ಹೆಚ್ಚಾಗಿದ್ದರೆ, ಉಳಿದ ಜಿಲ್ಲೆಗಳಲ್ಲಿ ಡೀಸೆಲ್ ದರ 87 ರಿಂದ 88 ರೂಪಾಯಿಯಷ್ಟಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 114.80 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+