Infographics: ನವೆಂಬರ್ 14ರಂದು ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಇಂಧನ ದರ?
ಬೆಂಗಳೂರು, ನವೆಂಬರ್ 14: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ನವೆಂಬರ್ 14ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಮೂರೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆ ಬಳಿಕ ಬೆಲೆಯು ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ. ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಗರಿಷ್ಠ 104.29 ರೂಪಾಯಿ ಆಗಿದೆ. ಇದೇ ಜಿಲ್ಲೆಯಲ್ಲಿ ಡೀಸೆಲ್ ದರವು ಗರಿಷ್ಠ 89.90 ರೂ. ಇದೆ.
ಕಳೆದ ವರ್ಷ 2021ರ ಮೇ 4ರಿಂದ ನವೆಂಬರ್ 4ರವರೆಗೆ ಹಾಗೂ ಡೀಸೆಲ್ ಅನೇಕ ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರವು ಮೂಲ ಬೆಲೆಯ ಶೇಕಡ 125ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ.ನಷ್ಟಿದೆ.ಕಳೆದ ವರ್ಷದ ನವೆಂಬರ್ 4ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.
ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಹಿನ್ನೆಲೆ ಮುಂದಿನ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ನಿರೀಕ್ಷೆಯಿದೆ. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?
ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 101.94 ರೂಪಾಯಿಗೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 87.89ರೂಪಾಯಿಗೆ ಆಗಿದೆ. ಬಾಗಲಕೋಟೆ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ದರ 102 ರೂಪಾಯಿ ಗಡಿ ದಾಟಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ದರ 104.29 ರೂಪಾಯಿ ಆಗಿರುವುದೇ ಕರ್ನಾಟಕದಲ್ಲಿ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಇನ್ನು ನಿನ್ನೆ ಅದೇ ದಾವಣಗೆರೆಯಲ್ಲಿ 102.52 ರೂ. ಪೆಟ್ರೋಲ್ ಬೆಲೆ ಇತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 100ರಿಂದ 103 ರೂ. ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಕರ್ನಾಟಕದ ಪ್ರಮುಖ ನಗರಗಳಲ್ಲಿ ಡೀಸೆಲ್ ದರ?
ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 87.89 ರೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 89.90 ರೂ. ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ಚಿಕ್ಕಮಗಳೂರು ಡೀಸೆಲ್ ಬೆಲೆಯು 88.29 ರೂಪಾಯಿ ಇತ್ತು. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡುಗು, ಕೊಪ್ಪಳ, ಶಿವಮೊಗ್ಗ, ಜಿಲ್ಲೆಗಳಲ್ಲಿ 88ರೂಪಾಯಿಗಿಂತ ಹೆಚ್ಚಾಗಿದ್ದು, ಉಳಿದ ಜಿಲ್ಲೆಗಳಲ್ಲಿ 87ರಿಂದ 88 ರೂಪಾಯಿಯಷ್ಟಿದೆ.

ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ರಷ್ಯಾ- ಉಕ್ರೇನ್ ಯುದ್ಧದಿಂದಾಗಿ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 100 ಯುಎಸ್ ಡಾಲರ್ಗಳಷ್ಟು ಏರಿಕೆಯಾಗಿತ್ತು. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಕಚ್ಚಾ ತೈಲದ ಬೆಲೆ ಇಳಿಕೆಯ ಪ್ರವೃತ್ತಿ ಮುಂದುವರಿದಿದೆ. ಇಂದು ಬೆಲೆಯು ಪ್ರತಿ ಬ್ಯಾರೆಲ್‌ಗೆ 84ರಿಂದ 86 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 3.60 ಡಾಲರ್ ಏರಿಕೆಯಾಗಿದೆ.
ಕಚ್ಚಾ ತೈಲ ಹಾಗೂ ಇಂಧನದಲ್ಲಿ ಅಂತರರಾಷ್ಟ್ರೀಯ ಬೆಲೆಗಳು ಸರಾಸರಿ 30%ರಷ್ಟು ಕುಸಿದಿದ್ದರೂ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಹನಗಳ ಇಂಧನ ದರಗಳ ದೈನಂದಿನ ಬೆಲೆಗಳ ಮೇಲೆ 6 ತಿಂಗಳ ಅವಧಿಯ ನಿಷೇಧವನ್ನು ತಕ್ಷಣವೇ ತೆಗೆದುಹಾಕಲು ಯಾವುದೇ ಚಿತ್ತವನ್ನು ಹೊಂದಿಲ್ಲ ಎಂದು ತೋರುತ್ತದೆ.
2022ರ ಆರಂಭದಲ್ಲಿ ರಷ್ಯಾ-ಉಕ್ರೇನ್ ಯುದ್ಧವು ಪ್ರಾರಂಭವಾದಾಗ, ಕಚ್ಚಾ ತೈಲ ಬೆಲೆಗಳು $ 120ಕ್ಕಿಂತ ಹೆಚ್ಚಾಯಿತು. ತೈಲ ಬೆಲೆಗಳು ಈಗ ತಿಂಗಳ ಮೊದಲ ಬಾರಿಗೆ ಬ್ಯಾರೆಲ್‌ಗೆ $ 84ಕ್ಕೆ ತಮ್ಮ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಇದಲ್ಲದೆ, ಭಾರತೀಯ ಸಂಸ್ಕರಣಾಗಾರಗಳು ಯುದ್ಧದ ನಿರ್ಬಂಧಗಳ ನಂತರ ರಷ್ಯಾದಿಂದ ರಿಯಾಯಿತಿ ತೈಲವನ್ನು ಪಡೆದುಕೊಳ್ಳುತ್ತಿವೆ. ವಾಸ್ತವವಾಗಿ, ಒಂದು ವರ್ಷದ ಹಿಂದೆ ಕೇವಲ 0.5% ಗೆ ಹೋಲಿಸಿದರೆ ರಷ್ಯಾದ ತೈಲವು ಈಗ ಭಾರತದ ಒಟ್ಟಾರೆ ಆಮದುಗಳಲ್ಲಿ 16% ರಷ್ಟಿದೆ. ಭಾರತದಲ್ಲಿ ಇಂಧನ ಬೆಲೆಗಳು ಹೆಚ್ಚಾಗಿ ಬದಲಾಗದೆ ಉಳಿದಿವೆ.
-
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications