Get Updates
Get notified of breaking news, exclusive insights, and must-see stories!

Infographics: ಮತ್ತೆ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಹೇಗಿದೆ?

ನವದೆಹಲಿ, ಮಾರ್ಚ್ 23: ಬುಧವಾರ ಮತ್ತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಏರಿಕೆ ಕಂಡಿದೆ. ಇಂದು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಮತ್ತೆ ಪರಿಷ್ಕರಣೆ ಮಾಡಲಾಗಿದೆ. 80 ಪೈಸೆ ಏರಿಕೆ ಕಂಡು ಬಂದಿದೆ. ಸುಮಾರು 137 ದಿನಗಳ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಾರ್ಚ್ 22ರಂದು ಪರಿಷ್ಕರಣೆ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆ ಮಾಡಲಾಗಿತ್ತು. ಬುಧವಾರ ಮತ್ತೆ 80 ಪೈಸೆ ಹೆಚ್ಚಿಸಲಾಗಿದೆ.

2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆ ಕಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಆ ನಂತರ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯು ಏರಿಕೆ ಕಂಡಿರಲಿಲ್ಲ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊರತುಪಡಿಸಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್‌, ಡೀಸೆಲ್‌ ಬೆಲೆಯು ಏರಿಳಿತ ಕಂಡು ಬಂದಿತ್ತು. ಮಾರ್ಚ್ 22ರಂದು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದ್ದು, ಮಾರ್ಚ್ 23ರಂದು ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ದರವು ಹೆಚ್ಚಳವಾಗಿದೆ.

ಈಗ ಉಕ್ರೇನ್‌ ಹಾಗೂ ರಷ್ಯಾದ ಯುದ್ಧದ ನಡುವೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಯು ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಮಧ್ಯೆ ಭಾರತದಲ್ಲೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್‌ ಬೆಲೆ 101.44 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್‌ ಬೆಲೆ 101.26 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್‌ ದರ 102.58 ಆಗಿದೆ. ನಿನ್ನೆ ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್‌ ದರ 101.49 ರೂ ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್‌ ಬೆಲೆ ಈ ಕೆಳಗಿದೆ. ಮುಂದೆ ಓದಿ..

 ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?

ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆಯು 101.42 ರೂಪಾಯಿ ಆಗಿತ್ತು. ಇಂದು ಮತ್ತೆ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಪೆಟ್ರೋಲ್‌ ಬೆಲೆಯು 102.26 ರೂಪಾಯಿ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ 104.47 ರೂ ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್‌ ಬೆಲೆ 102.94 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 101 ರಿಂದ 103ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

 ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಆಗಿತ್ತು. ಆದರೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಬಳಿಕ ಬೆಂಗಳೂರಿನಲ್ಲಿ ಡೀಸೆಲ್‌ ಬೆಲೆಯು 86.58 ರೂ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ 88.45 ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 87.04 ರೂ ಪ್ರತಿ ಲೀಟರ್ ನಷ್ಟಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 86 ರಿಂದ 87ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

 ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

 ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್‌ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್​ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 118.0 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.32 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+