Infographics: ಫೆ.24ರಂದು ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಹೇಗಿದೆ?
ನವದೆಹಲಿ, ಫೆಬ್ರವರಿ 24: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಫೆಬ್ರವರಿ 24ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಬಹುತೇಕ ಎರಡೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆ ಬಳಿಕ ಬೆಲೆಯು ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 99.84 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 100.12 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 100.65 ರೂ ಆಗಿದೆ. ನಿನ್ನೆ ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 100.58 ರೂ ಆಗಿತ್ತು.
2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ ಶೇಕಡ 125 ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಕಳೆದ ವರ್ಷದ ನವೆಂಬರ್ 4ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.
ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವ ಹಿನ್ನೆಲೆಯಿಂದಾಗಿ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿ ಆಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ 102.79 ರೂ ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 101.91 ರೂಪಾಯಿ ಆಗಿತ್ತು. ಇನ್ನು ನಿನ್ನೆ ಚಿಕ್ಕಮಗಳೂರಿನಲ್ಲಿ ಅಧಿಕ ಪೆಟ್ರೋಲ್ ಬೆಲೆ ಇತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 99 ರಿಂದ 101ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಇಗಿದೆ. ದಾವಣಗೆರೆ ಜಿಲ್ಲೆಯಲ್ಲಿ 86.88 ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 86.09 ರೂ ಪ್ರತಿ ಲೀಟರ್ ನಷ್ಟಿತ್ತು. ದಾವಣಗೆರೆ, ಕೊಡಗು, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈಗ ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 104.50 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=75.66 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications