Infographics: ಮಾ.24ರಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?
ನವದೆಹಲಿ, ಮಾರ್ಚ್ 24: ಗುರುವಾರ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಇಂದು ಸ್ಥಿರವಾಗಿದೆ. ಸತತ ಎರಡು ದಿನಗಳ ಕಾಲ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮತ್ತೆ ಪರಿಷ್ಕರಣೆ ಮಾಡಲಾಗಿತ್ತು. ಎರಡು ದಿನಗಳು ಪೆಟ್ರೋಲ್, ಡೀಸೆಲ್ ದರ 80 ಪೈಸೆ ಏರಿಕೆ ಕಂಡು ಬಂದಿದೆ. ಸುಮಾರು 137 ದಿನಗಳ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಾರ್ಚ್ 22ರಂದು ಪರಿಷ್ಕರಣೆ ಮಾಡಿದೆ. ಮಾರ್ಚ್ 23ರಂದು ಕೂಡಾ ಪರಿಷ್ಕರಣೆ ಮಾಡಲಾಗಿದೆ. ಆದರೆ ಮಾರ್ಚ್ 24ರಂದು ಇಂಧನ ದರ ಸ್ಥಿರವಾಗಿದೆ.
2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆ ಕಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಆ ನಂತರ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಕೆ ಕಂಡಿರಲಿಲ್ಲ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊರತುಪಡಿಸಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಳಿತ ಕಂಡು ಬಂದಿತ್ತು. ಆ ಬಳಿಕ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ.
ಈಗ ಉಕ್ರೇನ್ ಹಾಗೂ ರಷ್ಯಾದ ಯುದ್ಧದ ನಡುವೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಯು ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಮಧ್ಯೆ ಭಾರತದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಇಂದು ಇಂಧನ ದರವು ಸ್ಥಿರವಾಗಿದೆ. ರಾಜ್ಯದ ಕೆಲವು ನಗರಗಳಲ್ಲಿ ಏರಿಳಿತ ಕಂಡು ಬಂದಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 102.19 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 101.44 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 102.42 ಆಗಿದೆ. ನಿನ್ನೆ ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 102.58 ರೂ ಆಗಿತ್ತು. ರಾಜ್ಯದ ನಗರಗಳ ಪೆಟ್ರೋಲ್ ಡಿಸೇಲ್ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?
ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಮಾರ್ಚ್ 22ರಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು ಸ್ಥಿರವಾಗಿದ್ದು, ಪೆಟ್ರೋಲ್ ಬೆಲೆಯು 102.26 ರೂಪಾಯಿ ಆಗಿದೆ. ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ 104.11 ರೂ ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 104.47 ರೂಪಾಯಿ ಆಗಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪೆಟ್ರೋಲ್ ಬೆಲೆ 103.55 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 102 ರಿಂದ 103ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಆಗಿತ್ತು. ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಮಾರ್ಚ್ 22ರಂದು ಬೆಲೆ ಏರಿಕೆ ಆಗಿದೆ. ಇಂದು ಡೀಸೆಲ್ ಬೆಲೆ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಬೆಲೆಯು 86.58 ರೂ ಆಗಿದೆ. ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ 88.12 ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ದಾವಣಗೆರೆ ಜಿಲ್ಲೆಯಲ್ಲಿ 88.45 ರೂ ಪ್ರತಿ ಲೀಟರ್ ನಷ್ಟಿತ್ತು. ಹಾಗೆಯೇ ಚಿತ್ರದುರ್ಗ ಜಿಲ್ಲೆಯಲ್ಲಿ ನಿನ್ನೆ ಪ್ರತಿ ಲೀಟರ್ ಡೀಸೆಲ್ ಬೆಲೆ 87.61 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 86 ರಿಂದ 87ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ನಿನ್ನೆ ಕೂಡಾ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ
ಪ್ರಸ್ತುತ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಹೆಚ್ಚಳವಾಗಿದೆ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಆದರೆ ಈಗ ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಪರಿಣಾಮವಾಗಿ ಬ್ರೆಂಟ್ ಕಚ್ಚಾತೈಲದ ದರ ಏರಿಕೆ ಕಂಡಿದೆ. ಈ ಸಮಯಕ್ಕೆ 121.1 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=76.39 ರುಪಾಯಿ). ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)
-
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications