Infographics: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?

ನವದೆಹಲಿ, ಏಪ್ರಿಲ್ 26: ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಯು ಸೋಮವಾರ ಸ್ಥಿರವಾಗಿದೆ. ಸುಮಾರು 137 ದಿನಗಳ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಾರ್ಚ್ 22ರಂದು ಪರಿಷ್ಕರಣೆ ಮಾಡಿದೆ. ಆ ಬಳಿಕ ನಿರಂತರ ಏರಿಕೆ ಮಾಡಲಾಗಿತ್ತು. ಆದರೆ ಕೆಲವು ದಿನಗಳಿಂದ ಇಂಧನ ದರವು ಸ್ಥಿರವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಇಂದು ಸ್ಥಿರವಾಗಿದೆ, ಕೆಲವೆಡೆ ಕೊಂಚ ಏರಿಳಿತ ಕಂಡು ಬಂದಿದೆ.

2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆ ಕಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಆ ನಂತರ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯು ಏರಿಕೆ ಕಂಡಿರಲಿಲ್ಲ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊರತುಪಡಿಸಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್‌, ಡೀಸೆಲ್‌ ಬೆಲೆಯು ಏರಿಳಿತ ಕಂಡು ಬಂದಿತ್ತು. ಮಾರ್ಚ್ 22ರಂದು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ.

ಈಗ ಉಕ್ರೇನ್‌ ಹಾಗೂ ರಷ್ಯಾದ ಯುದ್ಧದ ನಡುವೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಯು ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಮಧ್ಯೆ ಭಾರತದಲ್ಲೂ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿತ್ತು. ಆದರೆ ಬಳಿಕ ಹಲವಾರು ದಿನಗಳಿಂದ ಸ್ಥಿರವಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್‌ ಬೆಲೆ 110.30 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್‌ ಬೆಲೆ 110.29 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್‌ ದರ 110.74 ಆಗಿದೆ. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್‌ ಬೆಲೆ ಈ ಕೆಳಗಿದೆ. ಮುಂದೆ ಓದಿ..

{photo-feature}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+