Infographics: ಜ.18ರಂದು ರಾಜ್ಯದ ಜಿಲ್ಲೆಗಳಲ್ಲಿ ಇಂಧನ ದರ ಏನಿದೆ?

ಕರ್ನಾಟಕ, ಜನವರಿ 18: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜನವರಿ 18ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಬಹುತೇಕ ಎರಡೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.39 ರೂ., ಹಾಗೂ ಡೀಸೆಲ್ ಬೆಲೆ ಗರಿಷ್ಠ 86.67 ರೂ. ದಾಖಲಾಗಿದೆ.

2021ರ ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಕಳೆದ ನವೆಂಬರ್ 5ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 109.98 ರೂ. ಪ್ರತಿ ಲೀಟರ್, ಡೀಸೆಲ್ 94.14 ರೂ. ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

Petrol And Diesel Price Unchanged On 18th January: Check Rate in Your City

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 102 ರೂಪಾಯಿ
ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿ ಇದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ತಲುಪಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಗರಿಷ್ಠ 102.39 ರೂ. ಪ್ರತಿ ಲೀಟರ್ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಯಲ್ಲಿ 102 ರೂ. ಪ್ಲಸ್ ಇದೆ. ಇತರೆ ಜಿಲ್ಲೆಗಳಲ್ಲಿ 99ರಿಂದ 101 ರೂ.ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಅಧಿಕ ಇರುವ ಜಿಲ್ಲೆ
ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ 85.01 ರೂ. ಪ್ರತಿ ಲೀಟರ್‌ನಷ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ 86.67 ರೂ. ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಕೊಪ್ಪಳ, ಕೊಡಗು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ 86 ರೂ. ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರೂ.ನಿಂದ 85 ರೂ. ಪ್ಲಸ್ ದರ ಇದೆ.

Petrol And Diesel Price Unchanged On 18th January: Check Rate in Your City

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಸೆಂಬರ್ 16ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಇಳಿಕೆ ಕಂಡು 73.60 ಯುಎಸ್ ಡಾಲರ್ (1 USD=75.98 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 114.01 ರೂ. ನಷ್ಟಿದೆ, ಡೀಸೆಲ್ ಬೆಲೆ 95.04 ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 111 ರೂ. ಗಡಿ ದಾಟಿದೆ.

Recommended Video

      ಕೊಹ್ಲಿ ನಾಯಕತ್ವ ತ್ಯಜಿಸಿದ್ದರ ಬಗ್ಗೆ ಶಾಹಿದ್ ಅಫ್ರಿದಿ ಕೊಟ್ಟ ಹೇಳಿಕೆ ನಿಜಕ್ಕೂ ಆಶ್ಚರ್ಯ | Oneindia Kannada

      ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
      ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜನವರಿ 7) ಮಾಹಿತಿ ಇಲ್ಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+