ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ವಿವಿಧ ಪಟ್ಟಣಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

|
Google Oneindia Kannada News

ಬೆಂಗಳೂರು, ಆಗಸ್ಟ್ 25: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 25ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಸತತ ಎರಡನೇ ದಿನವೂ ಸರಾಸರಿ 10-15 ಪೈಸೆಯಷ್ಟು ಇಳಿಕೆಯಾಗಿತ್ತು. ಕಳೆದ 35 ದಿನಗಳ ಬಳಿಕ ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಇಳಿಕೆಯಾಗಿತ್ತು. ಆದರೆ, ಇಂದು ಇಂಧನ ದರ ಸ್ಥಿರವಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರು ಕನಿಷ್ಠ 107 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಚೆನ್ನೈ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ 3ರು ಇಳಿಕೆಯಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.52ರು ಪ್ರತಿ ಲೀಟರ್, ಡೀಸೆಲ್ 96.48ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 107ರು ದಾಟಿದ ಜಿಲ್ಲೆಗಳು:

ಪೆಟ್ರೋಲ್ ಪ್ರತಿ ಲೀಟರ್‌ಗೆ 107ರು ದಾಟಿದ ಜಿಲ್ಲೆಗಳು:

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.98ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.34ರೂಪಾಯಿಗೆ ಮುಟ್ಟಿದೆ. ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 106.42 ರು ಹಾಗೂ 106.46 ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿತ್ರದುರ್ಗ, ದಾವಣಗೆರೆ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಲೆ 106 ಪ್ಲಸ್ ಇದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 20-21ಪೈಸೆಯಷ್ಟು ಇಳಿಕೆಯಾಗಿತ್ತು, ಆಗಸ್ಟ್ 25ರಂದು ಡೀಸೆಲ್ ದರವು ಪ್ರತಿ ಲೀಟರ್‌ಗೆ 94.34 ರೂಪಾಯಿಗೆ ಮುಟ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರು ಆಸುಪಾಸಿನಲ್ಲಿದೆ. ಮಿಕ್ಕ ಜಿಲ್ಲೆಯಲ್ಲಿ 95 ರಿಂದ 96 ರು ನಷ್ಟಿದೆ.

 ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ 25ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಏರಿಕೆ ಕಂಡು 70.60ಯುಎಸ್ ಡಾಲರ್(1 USD=74.20 ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.85 ರು ನಷ್ಟಿದೆ, ಡೀಸೆಲ್ ಬೆಲೆ 102. 13ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಆಗಸ್ಟ್ 25) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Petrol Rates changed, Diesel slashed on Wednesday (August 25) across Karnataka. A litre of petrol now costs Rs 104.98, Diesel at Rs 94.34 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X