ತಿಂಗಳ ಆರಂಭದಲ್ಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಬೆಂಗಳೂರು, ಸೆಪ್ಟೆಂಬರ್ 01: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಸೆಪ್ಟೆಂಬರ್ 01ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿವೆ. ಪೆಟ್ರೋಲ್, ಡೀಸೆಲ್ ಬೆಲೆ ಸತತ ಏಳನೇ ದಿನವೂ ಬದಲಾಗಿಲ್ಲ. ಇದಕ್ಕೂ ಮುನ್ನ ಕಳೆದ 36 ದಿನಗಳ ಬಳಿಕ ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಇಳಿಕೆಯಾಗಿತ್ತು. ಇಂದು ಇಂಧನ ದರ 15 ಪೈಸೆ ಪ್ರತಿ ಲೀಟರ್ ನಂತೆ ಇಳಿಕೆಯಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 104 ರು ಕನಿಷ್ಠ 107 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಪುದುಚೇರಿ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ ಸುಮಾರು 3ರು ಇಳಿಕೆಯಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.39 ರು ಪ್ರತಿ ಲೀಟರ್, ಡೀಸೆಲ್ 96.33ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ವಿವಿಧ ದರಗಳ ವಿವರ ಮುಂದಿದೆ...

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 104.84 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 94.19ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 106.80ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಲೆ 106 ಪ್ಲಸ್ ಇದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳು

ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 20-21ಪೈಸೆಯಷ್ಟು ಇಳಿಕೆಯಾಗಿತ್ತು, ಸೆ.1ರಂದು ಡೀಸೆಲ್ ದರವು ಪ್ರತಿ ಲೀಟರ್‌ಗೆ 15ಪೈಸೆ ಇಳಿಕೆಯಾಗಿ 94.19 ರೂಪಾಯಿಗೆ ಮುಟ್ಟಿದೆ. ಉಳಿದಂತೆ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಧಾರವಾಡ,ಗದಗ, ಕಲಬುರಗಿ, ಹಾಸನ, ಮಂಡ್ಯ, ಮೈಸೂರು ಹಾಗೂ ಉಡುಪಿಯಲ್ಲಿ ಪ್ರತಿ ಲೀಟರ್ 94 ರಿಂದ 95 ರು ಆಸುಪಾಸಿನಲ್ಲಿದೆ. ಮಿಕ್ಕ ಜಿಲ್ಲೆಯಲ್ಲಿ 95 ರಿಂದ 96 ರು ನಷ್ಟಿದೆ.

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ರಾಜಸ್ಥಾನದಲ್ಲಿ ಇಂದಿಗೂ ಬೆಲೆ ಅತ್ಯಧಿಕ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 01ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಏರಿಕೆ ಕಂಡು 72.11 ಯುಎಸ್ ಡಾಲರ್(1 USD=73.01ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113.12 ರು ನಷ್ಟಿದೆ, ಡೀಸೆಲ್ ಬೆಲೆ 102.36ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಸೆ.1: ಅಡುಗೆ ಅನಿಲ ಸಿಲಿಂಡರ್ ಬೆಲೆ 25 ರು ಹೆಚ್ಚಳ
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಸೆಪ್ಟೆಂಬರ್ 01) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+