ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜ.25ರಂದು ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಹೀಗಿದೆ..

|
Google Oneindia Kannada News

ನವದೆಹಲಿ, ಜನವರಿ 25: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜನವರಿ 25ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿಲ್ಲ. ಬಹುತೇಕ ಎರಡೂವರೆ ತಿಂಗಳ ಹಿಂದೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆ ಬಳಿಕ ಬೆಲೆಯು ಸ್ಥಿರವಾಗಿದೆ. ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಕೊಂಚ ಏರಿಳಿತ ಕಂಡು ಬಂದಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್‌ ಬೆಲೆ 100.21 ರೂಪಾಯಿ ಆಗಿದೆ. ನಿನ್ನೆ 99.97 ರೂಪಾಯಿ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಪೆಟ್ರೋಲ್‌ ಬೆಲೆಯು 100.65 ರೂಪಾಯಿ ಆಗಿದೆ. ನಿನ್ನೆ 100.74 ರೂಪಾಯಿ ಆಗಿತ್ತು.

2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆಯಾಗಿತ್ತು. ಭಾರತ ಸರ್ಕಾರ ಮೂಲ ಬೆಲೆಯ ಶೇಕಡ 125 ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32.98 ರೂ. ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ. ಕಳೆದ ವರ್ಷದ ನವೆಂಬರ್ 4ರಂದು ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿವೆ.

ದೇಶದ ಪ್ರಮುಖ ನಗರಗಳಲ್ಲಿ ಜ.25ರ ಚಿನ್ನದ ಬೆಲೆ ದರ ಹೇಗಿದೆ? ದೇಶದ ಪ್ರಮುಖ ನಗರಗಳಲ್ಲಿ ಜ.25ರ ಚಿನ್ನದ ಬೆಲೆ ದರ ಹೇಗಿದೆ?

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ರಾಜ್ಯದ ನಗರಗಳ ಪೆಟ್ರೋಲ್‌ ಡಿಸೇಲ್‌ ಬೆಲೆ ಈ ಕೆಳಗಿದೆ. ಮುಂದೆ ಓದಿ..

ಜ.24ರಂದು ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಹೇಗಿದೆ?ಜ.24ರಂದು ಕರ್ನಾಟಕದ ಜಿಲ್ಲೆಗಳಲ್ಲಿ ಇಂಧನ ದರ ಹೇಗಿದೆ?

 ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?

ಕರ್ನಾಟಕದಲ್ಲಿ ಪೆಟ್ರೋಲ್ ದರ ಹೇಗಿದೆ?

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಗೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.01 ರೂಪಾಯಿಗೆ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ದಾವಣಗೆರೆಯಲ್ಲಿ 102.63 ರೂ ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 99 ರಿಂದ 101ರೂ ನಷ್ಟಿದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

 ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದಲ್ಲಿ ಡೀಸೆಲ್ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಕಳೆದ ತಿಂಗಳು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿದ್ದು, ಸದ್ಯ ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಇದೆ. ದಾವಣಗೆರೆ ಜಿಲ್ಲೆಯಲ್ಲಿ 86.73ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ.

 ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

 ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 1.47ರಷ್ಟು ಇಳಿಕೆಯಾಗಿ 92.00 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=74.66 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. (ಒನ್‌ಇಂಡಿಯಾ ಸುದ್ದಿ)

English summary
Infographics: Petrol and Diesel rates unchanged on 25th January, 2022 across Karnataka. A litre of petrol now costs Rs 100.58, Diesel at Rs 85.01 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X