Infographics: ಅ.4ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರು, ಅಕ್ಟೋಬರ್ 4: ಜಾಗತಿಕವಾಗಿ ಕಚ್ಚಾತೈಲ ಬೆಲೆ ಎರಡು ತಿಂಗಳಲ್ಲೇ ಕಾಣದಷ್ಟು ಏರಿಕೆಯಾಗಿದೆ. ಭಾರತದಲ್ಲಿ ಕಳೆದ 11 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಇಂದು (ಅ.4) ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಆದರೆ, ಭಾನುವಾರದಂದು ಪ್ರತಿ ಲೀಟರ್ ಮೇಲೆ ಸರಾಸರಿ 20 ರಿಂದ 30 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು. ಕಳೆದ ಎಂಟು ದಿನಗಳಲ್ಲಿ ಪೆಟ್ರೋಲ್ 1 ರುಪಾಯಿ, ಡೀಸೆಲ್ 2 ರುಪಾಯಿಯಷ್ಟು ಬೆಲೆ ಹೆಚ್ಚಳ ಕಂಡಿದೆ. ಸೆ.5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ನಂತರ ಇಂಧನ ಬೆಲೆ ಏರಿಕೆಯಾಗುತ್ತಿದೆ.

ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರೂ. ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲೆ ಬೆಲೆ ಮಾತ್ರ ಏರಿಕೆಯಾಗಿದೆ.

Petrol and Diesel Price Unchanged on October 4 Across Karnataka

ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಕಳೆದ 8 ದಿನಗಳಿಂದ ಚೇತರಿಸಿಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರೂ ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರೂ. ಬೆಲೆ ಇದ್ದೇ ಇದೆ.

ಉಳಿದಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರೂ ಗಿಂತ ತಗ್ಗಿಲ್ಲ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 43 ಬಾರಿ ಹಾಗೂ ಡೀಸೆಲ್ 40 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರೂ. ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರೂ. ಪ್ರತಿ ಲೀಟರ್ ಆಗಿದೆ.

Petrol and Diesel Price Unchanged on October 4 Across Karnataka

ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 102.39ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 90.77ರು ಆಗಿದೆ. ಅದೇ ರೀತಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಇಂಧನ ದರ ಪಟ್ಟಿ ವಿವರ ಮುಂದಿದೆ...

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಹೇಗಿದೆ?
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.95 ರೂ. ಇದೆ, ಬಳ್ಳಾರಿಯಲ್ಲಿ 107.85, ದಾವಣಗೆರೆಯಲ್ಲಿ 108.06 ರೂ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ 105, 106ರೂ. ಇದೆ.

ಡೀಸೆಲ್ ಬೆಲೆ ಕಡಿಮೆ ಇರುವ ಜಿಲ್ಲೆಗಳಿವು
ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 96.34 ರೂ. ಇದೆ. ಕಲಬುರಗಿಯಲ್ಲಿ 96.35 ರೂ. ಚಾಮರಾಜನಗರದಲ್ಲಿ 96.84 ರೂ., ಬೀದರ್‌ನಲ್ಲಿ 96.87 ರೂ., ಹಾಸನದಲ್ಲಿ 96.58 ರೂ. ಕೋಲಾರದಲ್ಲಿ 96.21 ರೂ., ಉಡುಪಿಯಲ್ಲಿ 95.89 ರೂ. ಮೈಸೂರಿನಲ್ಲಿ 96 ರೂ. ಹಾಸನದಲ್ಲಿ 96.58ರೂ. ಧಾರವಾಡ 96.13 ರೂ., ಬಿಜಾಪುರದಲ್ಲಿ 96.10 ರೂ. ಇದೆ.

Recommended Video

      Facebook,Insta,WhasApp ಸ್ಥಗಿತದಿಂದ ಜಾಗತಿಕ ಮಟ್ಟದಲ್ಲಾದ ಸಮಸ್ಯೆ ಏನು? | Oneindia Kannada

      ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
      ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಅಕ್ಟೋಬರ್ 1) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+